ಮನೆ ರಾಜಕೀಯ ಸಿಎಂ ಸ್ಥಾನಕ್ಕೆ 2,500 ಕೋಟಿ ರೂ. ಲಂಚ ಆರೋಪ: ಶಾಸಕ ಯತ್ನಾಳ್‌ ವಿರುದ್ಧ ಶಿಸ್ತು ಕ್ರಮದ...

ಸಿಎಂ ಸ್ಥಾನಕ್ಕೆ 2,500 ಕೋಟಿ ರೂ. ಲಂಚ ಆರೋಪ: ಶಾಸಕ ಯತ್ನಾಳ್‌ ವಿರುದ್ಧ ಶಿಸ್ತು ಕ್ರಮದ ಎಚ್ಚರಿಕೆ

0

ಬೆಂಗಳೂರು(Bengaluru)-ಮುಖ್ಯಮಂತ್ರಿ ಸ್ಥಾನಕ್ಕೆ 2,500 ಕೋಟಿ ರೂ. ಇಟ್ಟುಕೊಳ್ಳಬೇಕು ಎಂದಿರುವ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ (Basanagowda Patil Yatnal) ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಿಜೆಪಿ ರಾಜ್ಯ ಸಮಿತಿ ಶಿಫಾರಸು ಮಾಡಿದೆ.

ಇದೀಗ ಯತ್ನಾಳ್‌ ಉಲ್ಟಾ ಹೊಡೆದಿದ್ದು, ಬಿಜೆಪಿ ಹೈಕಮಾಂಡ್ ಹಣ ಕೇಳಿದೆ ಎಂದು ನಾನು ಹೇಳಿಲ್ಲ. ಜೆಪಿಯಲ್ಲಿ ರಾಜಕೀಯ ಗದ್ದಲ ಆರಂಭಿಸಿದೆ, ತಮ್ಮ ಹೇಳಿಕೆಗೆ ಶಿಸ್ತು ಸಮಿತಿ ಮುಂದೆ ಉತ್ತರಿಸುವುದಾಗಿ ಹೇಳಿದ್ದಾರೆ.

ಯತ್ನಾಳ್ ಹೇಳಿಕೆ ಬಗ್ಗೆ ಕೇಂದ್ರ ಶಿಸ್ತು ಸಮಿತಿಗೆ ಮಾಹಿತಿ ರವಾನೆ ಮಾಡಲಾಗಿದೆ. ಹಲವು ಬಾರಿ ಮುಜುಗರದ ಹೇಳಿಕೆ ನೀಡಿರುವ ಬಗ್ಗೆ ವರದಿ ನೀಡಲಾಗಿದೆ. ವರಿಷ್ಠರಿಗೆ ಎಲ್ಲಾ ಮಾಹಿತಿ ನೀಡಲಾಗಿದೆ. ಅವರಿಂದ ಪರಿಪೂರ್ಣ ವಿವರಣೆ ಪಡೆದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಅನಗತ್ಯ ಹೇಳಿಕೆ ನೀಡಿದ ಯತ್ನಾಳ್ ಅವರಿಗೆ ಈವರೆಗೆ ಎರಡು ಬಾರಿ ನೋಟಿಸ್ ಕೊಟ್ಟು, ವಿವರಣೆ ಪಡೆದುಕೊಳ್ಳಲಾಗಿದೆ. ಈ ಬಾರಿಯೂ ಶಿಸ್ತು ಸಮಿತಿ ಮೂಲಕ ನೋಟಿಸ್ ನೀಡಲಾಗುವುದು. ಉತ್ತರ ಬಂದ ನಂತರ ಕ್ರಮ ಜರುಗಿಸಲಾಗುತ್ತದೆ. ಬಿಜೆಪಿಯಲ್ಲಿ ದೊಡ್ಡವರು, ಸಣ್ಣವರು ಎನ್ನುವ ಪ್ರಶ್ನೆ ಇಲ್ಲ. ಎಲ್ಲರೂ ಶಿಸ್ತು ಸಮಿತಿಯ ವ್ಯಾಪ್ತಿಗೆ ಒಳಪಡುತ್ತಾರೆ ಎಂದರು.

ಇದೊಂದು ಸಾಮಾನ್ಯ ಹೇಳಿಕೆಯಾಗಿತ್ತು. ಪಕ್ಷವು ನನ್ನ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುತ್ತದೆ ಎಂಬ ವದಂತಿಗಳು ಮಾಧ್ಯಮಗಳು ಸೃಷ್ಟಿಸಿದ ಅಪಪ್ರಚಾರ ಎಂದು ಯತ್ನಾಳ್ ಕಿಡಿಕಾರಿದರು.  ಒಂದು ವೇಳೆ ಸಮಿತಿ ಬಯಸಿದರೇ ತಾವು ಹೋಗಿ ವಿವರಣೆ ನೀಡುವುದಾಗಿ ಅವರು ಹೇಳಿದ್ದಾರೆ. 

ಸದ್ಯ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಯುತ್ತಿರುವುದರಿಂದ ಉದ್ದೇಶಪೂರ್ವಕವಾಗಿ ತಮ್ಮ
ಹೇಳಿಕೆಯನ್ನು ತಿರುಚಲಾಗಿದೆ ಎಂದು ಅವರು ಹೇಳಿದ್ದಾರೆ. ಕೆಲವು ಜನರು ನನ್ನನ್ನು ಕ್ಯಾಬಿನೆಟ್‌ನಲ್ಲಿ ನೋಡಲು ಬಯಸುವುದಿಲ್ಲ ಹೀಗಾಗಿ ಅಪ ಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಹಿಂದಿನ ಲೇಖನಮೇ 10 ರಂದು ಡಾ.ಶ್ರೀ ಶ್ರೀ ಶಾಂತವೀರ ಮಹಾಸ್ವಾಮೀಜಿ ಅವರಿಗೆ ನುಡಿನಮನ
ಮುಂದಿನ ಲೇಖನದೇಶದಲ್ಲಿ 3,451 ಮಂದಿಗೆ ಕೋವಿಡ್‌ ಪಾಸಿಟಿವ್‌