ಬೆಂಗಳೂರು (Bengaluru)-ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 259 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,52,836ಕ್ಕೆ ಏರಿಕೆಯಾಗಿದೆ.
ಸೋಂಕಿನಿಂದ ಇಂದು ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40065 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
234 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,10,500ಕ್ಕೆ ಏರಿಕೆಯಾಗಿದೆ. ಇನ್ನು 2229 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಇಂದು 243 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,88,394ಕ್ಕೆ ಏರಿಕೆಯಾಗಿದೆ.