ಮನೆ ಅಪರಾಧ ಬೆಂಗಳೂರು ವಿಮಾನ ನಿಲ್ದಾಣದಲ್ಲಿ 26 ಕೋಟಿ ರೂ. ಮೌಲ್ಯದ ಕೊಕೇನ್ ವಶ: ಕೀನ್ಯಾ ಮೂಲದ ಮಹಿಳೆ...

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 26 ಕೋಟಿ ರೂ. ಮೌಲ್ಯದ ಕೊಕೇನ್ ವಶ: ಕೀನ್ಯಾ ಮೂಲದ ಮಹಿಳೆ ವಿಚಾರಣೆ

0

ದೇವನಹಳ್ಳಿ: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ದೆಹಲಿಗೆ ಅಕ್ರಮವಾಗಿ ಸಾಗಿಸುತ್ತಿದ್ದ 26 ಕೋಟಿ ಮೌಲ್ಯದ 2.6 ಕೆಜಿ ಕೊಕೇನ್ ವಶಕ್ಕೆ ಪಡೆದಿದ್ದಾರೆ.

ಕೊಕೇನ್ ಸಮೇತ ಮಹಿಳೆಯನ್ನ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ವಶಕ್ಕೆ ಪಡೆದು ಬೆಂಗಳೂರಿನ ಡಿಆರ್ ​ಐ ಕಚೇರಿಯಲ್ಲಿ ಮಹಿಳೆಯ ವಿಚಾರಣೆ ನಡೆಸುತ್ತಿದ್ದಾರೆ.

ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರವಾಸಿ ವೀಸಾ ಮೇರೆಗೆ ದೇಶಕ್ಕೆ ಬಂದಿದ್ದ ಕೀನ್ಯಾ ಮೂಲದ 36 ವರ್ಷದ ಮಹಿಳೆಯನ್ನು ವಶಕ್ಕೆ ಪಡೆಯಲಾಗಿದೆ.

ಮಹಿಳೆ ಲಗೇಜ್ ಬ್ಯಾಗ್ ​ನಲ್ಲಿ ಕೊಕೇನ್ ಮರೆಮಾಚಿ ಬೆಂಗಳೂರಿನಿಂದ ದೆಹಲಿಗೆ ಸಾಗಿಸಲು ಯತ್ನಿಸುತ್ತಿದ್ದಳು. ಈ ವೇಳೆ ಸಿಕ್ಕಿಬಿದ್ದಿದ್ದಾಳೆ. ಇಂಡಿಗೋ ವಿಮಾನದಲ್ಲಿ ದೆಹಲಿಗೆ ತೆರಳಲು ಚೆಕ್ ಇನ್ ಆಗ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾಳೆ. ಕೊಕೇನ್ ಸಮೇತ ಮಹಿಳೆಯನ್ನ ವಶಕ್ಕೆ ಪಡೆದ ಅಧಿಕಾರಿಗಳು ಬೆಂಗಳೂರಿನ ಡಿಆರ್ ​ಐ ಕಚೇರಿಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.