ಮನೆ ಶಿಕ್ಷಣ ಎಸ್’ಎಸ್’ಎಲ್’ಸಿ ವಿದ್ಯಾರ್ಥಿಗಳಿಗೆ 26 ಗ್ರೇಸ್‌ ಮಾರ್ಕ್ಸ್

ಎಸ್’ಎಸ್’ಎಲ್’ಸಿ ವಿದ್ಯಾರ್ಥಿಗಳಿಗೆ 26 ಗ್ರೇಸ್‌ ಮಾರ್ಕ್ಸ್

0

ಬೆಂಗಳೂರು: ಈ ಬಾರಿ ಎಸ್’ಎಸ್’ಎಲ್’ಸಿ ವಾರ್ಷಿಕ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ 26 ಗ್ರೇಸ್‌ ಮಾರ್ಕ್ಸ್ (ಕೃಪಾಂಕ) ನೀಡಲು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ಧರಿಸಿದೆ.

ಈ ಶೈಕ್ಷಣಿಕ ವರ್ಷದಲ್ಲಿ ಕೊರೊನಾದ ಹೊಡೆತ ಅಷ್ಟೊಂದು ತೀವ್ರವಾಗಿ ಬಾಧಿಸದಿದ್ದರೂ ಕೊರೊನಾ ಪ್ರಭಾವದ ಶೈಕ್ಷಣಿಕ ವರ್ಷವೆಂದು ಪರಿಗಣಿಸಿ ಗ್ರೇಸ್‌ ಮಾರ್ಕ್ಸ್ ನೀಡಲಾಗುತ್ತಿದೆ.

ಕೊರೊನಾದ ಸಮಯದಲ್ಲಿ ಕಲಿಕೆ ಮೇಲಾಗಿರುವ ಪರಿಣಾಮದಿಂದ ಮಕ್ಕಳು ಇನ್ನೂ ಪೂರ್ಣ ಪ್ರಮಾಣದಲ್ಲಿ ಚೇತರಿಸಿ ಕೊಳ್ಳದ ಕಾರಣದಿಂದ ಕೃಪಾಂಕ ನೀಡಲಾಗುತ್ತಿದೆ. ಒಟ್ಟಾರೆ ಕನಿಷ್ಠ ಅಂಕಗಳನ್ನು ಗಳಿಸುವ ಎಸ್’ಎಸ್’ಎಲ್’ಸಿ ವಿದ್ಯಾರ್ಥಿಗಳಿಗೆ ಶೇ.10 ಕೃಪಾಂಕ ನೀಡಿ ಉತ್ತೀರ್ಣಗೊಳಿಸುವುದು ಮಂಡಳಿಯ ಉದ್ದೇಶ.

ಎಸೆಸೆಲ್ಸಿಯ 6 ವಿಷಯಗಳ ಪೈಕಿ 3 ವಿಷಯಗಳಲ್ಲಿ ಉತ್ತೀರ್ಣರಾಗಿದ್ದರೆ, ಉಳಿದ 3 ವಿಷಯಗಳಿಗೆ ತಲಾ ಶೇ. 10ರಷ್ಟು ಆದರೆ ಒಟ್ಟು 26 ಅಂಕ ಮೀರದಂತೆ ಕೃಪಾಂಕ ದೊರೆಯಲಿದೆ. ಪ್ರಥಮ ಭಾಷೆಯಲ್ಲಿ ಗರಿಷ್ಠ 10 ಅಂಕ ಮತ್ತು ಉಳಿದ ವಿಷಯಗಳಲ್ಲಿ ಗರಿಷ್ಠ 8 ಅಂಕವನ್ನು ಕೃಪಾಂಕದ ರೂಪದಲ್ಲಿ ಪಡೆಯಬಹುದಾಗಿದೆ.

ಕಳೆದ ವರ್ಷವೂ ಶೇ.10 ಕೃಪಾಂಕ ಗಳನ್ನು ನೀಡಲಾಗಿತ್ತು. ಕೃಪಾಂಕದ ನೆರವಿನಿಂದ 40 ಸಾವಿರ ವಿದ್ಯಾರ್ಥಿಗಳು ಉತ್ತಿರ್ಣರಾಗಿದ್ದರು. 2019ರ ವರೆಗೆ ಶೇ. 5 ಕೃಪಾಂಕಗಳನ್ನು ಮಾತ್ರ ನೀಡಲಾಗುತ್ತಿತ್ತು.