ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 297 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 3,952,577ಕ್ಕೆ ಏರಿಕೆಯಾಗಿದೆ.
ಸೋಂಕಿನಿಂದ ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40,065 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
187 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 3,910,359ಕ್ಕೆ ಏರಿಕೆಯಾಗಿದೆ. ಇನ್ನು 2,204 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ 276 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 1,788,151ಕ್ಕೆ ಏರಿಕೆಯಾಗಿದೆ.