ಮನೆ ಶಿಕ್ಷಣ ಮೇ.23 ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ: ನಿಷೇಧಾಜ್ಞೆ ಜಾರಿ

ಮೇ.23 ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ: ನಿಷೇಧಾಜ್ಞೆ ಜಾರಿ

0

ಮೈಸೂರು:- ಮೇ.23 ರಿಂದ ಜೂ.3 ರವರೆಗೆ (ರಜಾ ದಿನಗಳನ್ನು ಹೊರತು ಪಡಿಸಿ) ಜಿಲ್ಲೆಯಲ್ಲಿ ನಡೆಯಲಿರುವ ದ್ವಿತೀಯ ಪಿ.ಯು.ಸಿ ಪೂರಕ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು “ನಿಷೇಧಿತ ಪ್ರದೇಶವೆಂದು ಘೋಷಿಸಿ ಮತ್ತು ಪರೀಕ್ಷೆಗಳು ಪ್ರಾರಂಭವಾಗುವ ಅರ್ಧ ಗಂಟೆ ಮುಂಚಿತವಾಗಿ ಮತ್ತು ಪರೀಕ್ಷಾ ಅವಧಿ ಮುಗಿಯುವವರೆಗೆ ಪರೀಕ್ಷಾ ಕೇಂದ್ರಗಳ ಸಮೀಪದಲ್ಲಿರುವ ಎಲ್ಲಾ ಕಾಪೀಯರ್ (ಜೆರಾಕ್ಸ್) ಅಂಗಡಿಗಳನ್ನು ಮುಚ್ಚುವಂತೆ ಅಪರ ಜಿಲ್ಲಾಧಿಕಾರಿಗಳಾದ ಕವಿತಾ ರಾಜರಾಂ ಅವರು ಆದೇಶಿಸಿರುತ್ತಾರೆ.

Join Our Whatsapp Group


ಈ ಆದೇಶವು ಪರೀಕ್ಷಾರ್ಥಿಗಳಿಗೆ ಹಾಗೂ ಪರೀಕ್ಷಾ ಸಿಬ್ಬಂದಿಗಳಿಗೆ ಅನ್ವಯಿಸುವುದಿಲ್ಲ, ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮತ್ತು ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸಲು ಮತ್ತು ಸುತ್ತಮುತ್ತಲಿರುವ ಕಾಪೀಯರ್ (ಜೆರಾಕ್ಸ್) ಅಂಗಡಿಗಳನ್ನು ಮುಚ್ಚಿಸಲು ನಗರದ ಪೊಲೀಸ್ ಅಧೀಕ್ಷಕರು ಕ್ರಮ ಕೈಗೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದಿನ ಲೇಖನಶಿವಣ್ಣ- ಬಾಲಯ್ಯ ಕಾಂಬಿನೇಷನ್’ನಲ್ಲಿ ಬಿಗ್ ಬಜೆಟ್ ಸಿನಿಮಾ
ಮುಂದಿನ ಲೇಖನWTC Final 2023: ಮೇ 23 ರಂದು ಇಂಗ್ಲೆಂಡ್ ತೆರಳಲಿರುವ ಟೀಂ ಇಂಡಿಯಾದ ಮೊದಲ ಬ್ಯಾಚ್