ನವದೆಹಲಿ: ಭಾರತದಲ್ಲಿ ಕೊರೊನಾ ಸೋಂಕು ದಿನೇ ದಿನೇ ಹೆಚ್ಚುತ್ತಲೇ ಇದ್ದು, ಇಂದು ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,06,064 ಹೊಸ ಕೇಸ್ ಪತ್ತೆಯಾಗಿದೆ. ಇದೇ ಅವಧಿಯಲ್ಲಿ 439 ಮಂದಿ ಮೃತಪಟ್ಟಿದ್ದಾರೆ.
ಸದ್ಯ ದೇಶದಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 22 ಲಕ್ಷದ 49 ಸಾವಿರದ 335ರಷ್ಟು ವರದಿಯಾಗಿದೆ. ಪ್ರತಿದಿನ ದಾಖಲಾಗುವ ಕೊರೋನಾ ಸೋಂಕಿತರ ಸಂಖ್ಯೆ ಶೇಕಡಾ 20.75ರಷ್ಟಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 2,43,495 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,68,04,145ಕ್ಕೆ ತಲುಪಿದೆ.
Omicron ಈಗ ಭಾರತದಲ್ಲಿ ಸಮುದಾಯ ಮಟ್ಟದಲ್ಲಿ ಹರಡುವ ಸ್ಥಿತಿಯಲ್ಲಿದ್ದು, ಮೆಟ್ರೊ ನಗರಗಳಲ್ಲಿ ತೀವ್ರವಾಗಿವೆ. ಮಹಾರಾಷ್ಟ್ರ, ದೆಹಲಿ, ಕರ್ನಾಟಕ ಸೇರಿದಂತೆ ದೇಶದ ಒಟ್ಟು 28 ರಾಜ್ಯಗಳಲ್ಲಿ ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ. ಈ ಪೈಕಿ ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ ಎಂದು ತಿಳಿದುಬಂದಿದೆ.