ಮನೆ ಆರೋಗ್ಯ ದೇಶದಲ್ಲಿಂದು 3.37 ಲಕ್ಷ ಹೊಸ ಕೇಸ್ ಪತ್ತೆ

ದೇಶದಲ್ಲಿಂದು 3.37 ಲಕ್ಷ ಹೊಸ ಕೇಸ್ ಪತ್ತೆ

0

ನವದೆಹಲಿ: ಭಾರತದಲ್ಲಿ ಕೊರೋನಾ ಏರಿಳಿಕೆ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,37,704 ಹೊಸ ಕೇಸ್ ಪತ್ತೆಯಾಗಿದೆ. ಇದೇ ಅವಧಿಯಲ್ಲಿ 488 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ. 

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,89,03,731ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,88,884ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 21,13,365ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 2,42,676 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,63,01,482ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 19,60,954 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 71,34,99,892 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 1,61,16,60,078 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ಓಮಿಕ್ರಾನ್ ಸೋಂಕಿತರ ಸಂಖ್ಯೆ 10,050ಕ್ಕೆ ಏರಿಕೆ
ಭಾರತದಲ್ಲಿ ಕೋವಿಡ್-19 ಸೋಂಕು ಉಲ್ಬಣವಾಗುತ್ತಿರುವ ಹೊತ್ತಿನಲ್ಲೇ ಓಮಿಕ್ರಾನ್ ಸೋಂಕಿತರ ಸಂಖ್ಯೆ ಕೂಡ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಈ ವರೆಗೂ ದೇಶಾದ್ಯಂತ 10,050 ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ.

ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ದೇಶಾದ್ಯಂತ ಇರುವ ಒಟ್ಟಾರೆ ಓಮಿಕ್ರಾನ್ ಸೋಂಕಿತರ ಸಂಖ್ಯೆ 10,050 ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.

ಮಹಾರಾಷ್ಟ್ರ, ದೆಹಲಿ, ಕರ್ನಾಟಕ ಸೇರಿದಂತೆ ದೇಶದ ಒಟ್ಟು 28 ರಾಜ್ಯಗಳಲ್ಲಿ ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ. ಈ ಪೈಕಿ ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ ಎಂದು ತಿಳಿದುಬಂದಿದೆ.