ಮನೆ ರಾಷ್ಟ್ರೀಯ ಮಹಾರಾಷ್ಟ್ರದಲ್ಲಿ 3.5 ತೀವ್ರತೆಯ ಭೂಕಂಪ

ಮಹಾರಾಷ್ಟ್ರದಲ್ಲಿ 3.5 ತೀವ್ರತೆಯ ಭೂಕಂಪ

0

ಮುಂಬೈ: ಮಹಾರಾಷ್ಟ್ರದ ಹಿಂಗೋಲಿಯಲ್ಲಿ ಇಂದು (ನ.20) ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ ಸಿಎಸ್) ಮಾಹಿತಿ ನೀಡಿದೆ.

ಯಾವುದೇ ಹಾನಿ ಬಗ್ಗೆ ತಕ್ಷಣದ ವರದಿಯಾಗಿಲ್ಲ. ಬೆಳಿಗ್ಗೆ 5.09ರ ಸುಮಾರಿಗೆ ಭೂಮಿ ಕಂಪಿಸಿದೆ. 5 ಕಿ.ಮೀ ಆಳದಲ್ಲಿ ಕಂಪನದ ಕೇಂದ್ರಬಿಂದುವನ್ನು ಗುರುತಿಸಲಾಗಿದೆ ಎಂದು ಎನ್‌ ಸಿಎಸ್ ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿದೆ.

ಈಚೆಗೆ ದೆಹಲಿ-ಎನ್‌ ಸಿಆರ್‌ ನಲ್ಲಿ ಭೂಕಂಪ ಸಂಭವಿಸಿತ್ತು. ಹರಿಯಾಣದ ಫರಿದಾಬಾದ್‌  ನಲ್ಲಿ 9 ಕಿ.ಮೀ ಆಳದಲ್ಲಿ ಕಂಪನದ ಕೇಂದ್ರಬಿಂದುವನ್ನು ಗುರುತಿಸಲಾಗಿತ್ತು.