ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 3 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ, ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಒಳನಾಡಿನ ಕಲಬುರಗಿ, ಯಾದಗಿರಿ, ಬೀದರ್, ವಿಜಯಪುರ ಜಿಲ್ಲೆಗಳ ಒಂದೆರಡು ಕಡೆ ಮಳೆಯಾಗುವ ಸಾಧ್ಯತೆ ಇದೆ.
ಮಾಲೂರು, ಜಿಕೆವಿಕೆ, ಸೈದಾಪುರ, ಬೆಂಗಳೂರು ಎಚ್ಎಎಲ್, ಮುಧೋಳ, ಹುಲಸೂರು, ಬೆಂಗಳೂರು ನಗರ, ಗೋಪಾಲನಗರದಲ್ಲಿ ಮಳೆಯಾಗಿದೆ. ಕಾರವಾರದಲ್ಲಿ 36.4 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.
ಎಚ್ಎಎಲ್ ನಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮೇ 6ರ ಆಸುಪಾಸಿನಲ್ಲಿ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಮೋಚಾ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಮೇ 7ರ ವರೆಗೆ ಭಾರೀ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.