ಮನೆ ರಾಷ್ಟ್ರೀಯ ಭದ್ರತಾ ಪಡೆಗಳಿಂದ ಮೂವರು ಉಗ್ರರ ಹತ್ಯೆ

ಭದ್ರತಾ ಪಡೆಗಳಿಂದ ಮೂವರು ಉಗ್ರರ ಹತ್ಯೆ

0

ಶ್ರೀನಗರ (Srinagar)- ಭದ್ರತಾ ಪಡೆಯವರು ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಮರನಾಥ ಯಾತ್ರೆಯ ಪ್ರಮುಖ ಮಾರ್ಗವಾದ ಅನಂತನಾಗ್ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಎನ್‌ ಕೌಂಟರ್‌ ನಲ್ಲಿ ಮೂವರು ಉಗ್ರರನ್ನು ಹತ್ಯೆಗೈಯಲಾಗಿದೆ.

ಹತ್ಯೆಯಾದ ಮೂವರು ಭಯೋತ್ಪಾದಕರ ಪೈಕಿ ಓರ್ವ ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕ ಸಂಘಟನೆ ಸೇರಿದವನಾಗಿದ್ದಾನೆ.

ಪಹಲ್ಗಾಮ್‌ನ ಕಾಡಿನಲ್ಲಿ ಭಯೋತ್ಪಾದಕರು ಅಡಗಿ ಕುಳಿತಿರು ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿದರು. ಈ ವೇಳೆ ಉಗ್ರರು ಭದ್ರತಾ ಪಡೆಗಳ ಗುಂಡು ಹಾರಿಸಿದ್ದಾರೆ. ಬಳಿಕ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ.

ಈ ಮಾರ್ಗದಲ್ಲಿ ಸಂಭವನೀಯ ಭಯೋತ್ಪಾದಕ ದಾಳಿಗಳನ್ನು ತಡೆಯುವಲ್ಲಿ ಈ ಎನ್‌ಕೌಂಟರ್ ದೊಡ್ಡ ಯಶಸ್ಸು ಎಂದು ಪೊಲೀಸರು ಹೇಳಿದ್ದಾರೆ.

ದಕ್ಷಿಣ ಕಾಶ್ಮೀರದ ಪ್ರವಾಸಿ ತಾಣವಾದ ಪಹಲ್ಗಾಮ್ ಅಮರನಾಥ ಯಾತ್ರೆಯ ಮೂಲ ಶಿಬಿರಗಳಲ್ಲಿ ಒಂದಾಗಿ ಕಾರ್ಯನಿರ್ವಹಿಸುತ್ತದೆ.  ಈ ಯಾತ್ರೆ ಎರಡು ವರ್ಷಗಳ ನಂತರ ಜೂನ್ 30 ರಿಂದ ಪ್ರಾರಂಭವಾಗಲಿದೆ.

ಹಿಂದಿನ ಲೇಖನಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ: ಹೆಚ್ಡಿಕೆ
ಮುಂದಿನ ಲೇಖನಭಾರತ–ಚೀನಾ ಗಡಿಯುದ್ದಕ್ಕೂ ಕಟ್ಟೆಚ್ಚರ ವಹಿಸಲಾಗಿದೆ: ಲೆ.ಜನರಲ್ ಉಪೇಂದ್ರ ದ್ವಿವೇದಿ