ಮನೆ ಅಪರಾಧ ಮರಕ್ಕೆ ಕಾರು ಡಿಕ್ಕಿ: ಮೂವರು ಸಾವು

ಮರಕ್ಕೆ ಕಾರು ಡಿಕ್ಕಿ: ಮೂವರು ಸಾವು

0

ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ವಾಣಿವಿಲಾಸ ರಸ್ತೆಯ ಬಿರೇನಹಳ್ಳಿ ಸಮೀಪ ಕಾರು ಮರಕ್ಕೆ ಡಿಕ್ಕಿ ಹೊಡೆದು ಮೂವರು ಮಹಿಳೆಯರು ಮೃತಪಟ್ಟಿದ್ದು, ಇನ್ನೋರ್ವ ಬಾಲಕಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.

ಬೆಂಗಳೂರಿನ ಆರ್‌ಆರ್‌ ನಗರದ ನಿವಾಸಿಗಳಾದ ವಿಶಾಲಾಕ್ಷಿ (70), ರೇಣುಕಾದೇವಿ (39) ಮತ್ತು ಸುಧಿಕ್ಷಾ (17) ಮೃತಪಟ್ಟ ದುರ್ದೈವಿಗಳು. ಪ್ರತೀಕ್ಷಾ (13) ಗಂಭೀರವಾಗಿ ಗಾಯಗೊಂಡಿದ್ದು, ಹಿರಿಯೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಭದ್ರಾವತಿಯಲ್ಲಿ ಮದುವೆ ಮುಗಿಸಿಕೊಂಡು ಮಂಗಳವಾರ ನಸುಕಿನಲ್ಲಿ ಬೆಂಗಳೂರಿಗೆ ಮರಳುತ್ತಿದ್ದರು. ರೇಣುಕಾದೇವಿ ಕಾರು ಚಾಲನೆ ಮಾಡುತ್ತಿದ್ದರು. ಬಿರೇನಹಳ್ಳಿ ಸಮೀಪ ಚಾಲಕಿಯ ನಿಯಂತ್ರಣ ಕಳೆದುಕೊಂಡ ಕಾರು ಮರಕ್ಕೆ ಅಪ್ಪಳಿಸಿದೆ. ವಿಶಾಲಾಕ್ಷಿ ಹಾಗೂ ಸುಧಿಕ್ಷಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರೇಣುಕಾದೇವಿ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ ಎಂದು ಹಿರಿಯೂರು ಗ್ರಾಮಾಂತರ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ಹಿಂದಿನ ಲೇಖನಕೊರೋನಾ: ದೇಶದಲ್ಲಿಂದು 67 ಸಾವಿರ ಹೊಸ ಕೇಸ್ ಪತ್ತೆ
ಮುಂದಿನ ಲೇಖನತಪ್ಪೊಪ್ಪಿಕೊಂಡ ಪಂಜಾಜ್ ಸಿಎಂ ಸೋದರಳಿಯ:  ಜಾರಿ ನಿರ್ದೇಶನಾಲಯ ಹೇಳಿಕೆ