ಮನೆ ಆರೋಗ್ಯ ಕೊರೋನಾ: ದೇಶದಲ್ಲಿಂದು 30,615 ಹೊಸ ಕೇಸ್ ಪತ್ತೆ

ಕೊರೋನಾ: ದೇಶದಲ್ಲಿಂದು 30,615 ಹೊಸ ಕೇಸ್ ಪತ್ತೆ

0

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 30,615 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 514 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ. 

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,27,23,558ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,09,872ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,70,240ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 82,988 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 41843446ಕ್ಕೆ ತಲುಪಿದೆ. ಇನ್ನು ಭಾರತದಲ್ಲಿ ಒಂದೇ 12,29,536 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 75,30,33,302 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಹಿಂದಿನ ಲೇಖನಹಿರಿಯ ಕವಿ ಚನ್ನವೀರ ಕಣವಿ ನಿಧನಕ್ಕೆ ಗಣ್ಯರ ಸಂತಾಪ
ಮುಂದಿನ ಲೇಖನಮೈಸೂರಿನಲ್ಲಿ ಹೋಟೆಲ್ ಕೆಲಸಕ್ಕೆ `ರೋಬೋ ಸುಂದರಿ’