ಮನೆ ಆರೋಗ್ಯ ದೇಶದಲ್ಲಿಂದು 30,757 ಹೊಸ ಕೊರೊನಾ ಕೇಸ್ ಪತ್ತೆ

ದೇಶದಲ್ಲಿಂದು 30,757 ಹೊಸ ಕೊರೊನಾ ಕೇಸ್ ಪತ್ತೆ

0

ನವದೆಹಲಿ: ಕೊರೊನಾ ಮಹಾಮಾರಿ ತನ್ನ ಅಬ್ಬರ ಕಡಿಮೆ ಮಾಡಿದ್ದು, ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 30,757 ಹೊಸ ಸೋಂಕು ಪ್ರಕರಣಗಳು ವರದಿಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

30,757 ಹೊಸ ಸೋಂಕು ಪ್ರಕರಣಗಳು ದಾಖಲಾಗಿದೆ. ಅಂತೆಯೇ ಇದೇ ಅವಧಿಯಲ್ಲಿ ಕೋವಿಡ್ ನಿಂದಾಗಿ 541 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,27,54,315ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,10,413ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,32,918ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 67,538 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,19,10,984ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 12,51,677 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 75,42,84,979 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಹಿಂದಿನ ಲೇಖನವಿವಾಹ ಸಮಾರಂಭದಲ್ಲಿ ಬಾವಿಗೆ ಬಿದ್ದು 13 ಮಂದಿ ದುರ್ಮರಣ
ಮುಂದಿನ ಲೇಖನದೇವಸ್ಥಾನಕ್ಕೆ ಘಂಟೆ, ಜಾಗಟೆ ಸದ್ದಿಗೆ ನೀಡಿದ್ದ ನೋಟಿಸ್ ವಾಪಸ್