ನವದೆಹಲಿ (New Delhi)-ದೇಶದಲ್ಲಿ ಕೋವಿಡ್ 4ನೇ ಅಲೆಯ ಭೀತಿ ಎದುರಾಗಿರುವ ನಡುವೆ ದೇಶದಲ್ಲಿ ಕೋವಿಡ್ (Covid) ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ.
ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 3,324 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 40 ಮಂದಿ ಸಾವಿಗೀಡಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,30,79,188ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,23,753ಕ್ಕೆ ಏರಿಕೆಯಾಗಿದೆ.
ಈ ನಡುವೆ 2,876 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,25,36,253ಕ್ಕೆ ತಲುಪಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 19,092 ಇದೆ.
ಇನ್ನು ಭಾರತದಲ್ಲಿ ಒಂದೇ 4,71,087 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 83,79,13,110 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,89,17,69,346 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.