ಮನೆ ಆರೋಗ್ಯ ಕೊರೊನಾ : ಇಂದು ದೇಶದಲ್ಲಿ 34,113 ಸೋಂಕು ಪ್ರಕರಣ

ಕೊರೊನಾ : ಇಂದು ದೇಶದಲ್ಲಿ 34,113 ಸೋಂಕು ಪ್ರಕರಣ

0

ಬೆಂಗಳೂರು: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ 34,113 ಜನರಲ್ಲಿ ಸೋಂಕು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಸೋಂಕಿತರ ಸಾವಿನ ಸಂಖ್ಯೆ ಕೂಡ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 346 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಇದು ಕಳೆದ ಒಂದು ವಾರದಲ್ಲಿಯೇ ದಾಖಲಾದ ಅತಿ ಕಡಿಮೆ ಪ್ರಮಾಣದ ಸಾವಿನ ಸಂಖ್ಯೆಯಾಗಿದೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,09,011 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 4,78,882 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 91,930 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,16,77,641 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.