ಮನೆ ರಾಜ್ಯ ಕೇಂದ್ರದಿಂದ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ

ಕೇಂದ್ರದಿಂದ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ

0

ನವದೆಹಲಿ/ಬೆಂಗಳೂರು: ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಣೆ ಮಾಡಿದೆ.

Join Our Whatsapp Group

ನೆರೆ ಪರಿಹಾರವೆಂದು ತಮಿಳುನಾಡಿಗೆ 275 ಕೋಟಿ ರೂ. ಪರಿಹಾರ ನೀಡಿದೆ. ಕಳೆದ ವರ್ಷ ಸೆಪ್ಟೆಂಬರ್​ನಲ್ಲಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಬರ ಪರಿಹಾರಕ್ಕಾಗಿ 18,174 ಕೋಟಿ ಹಣ ಬೇಡಿಕೆ ಇಟ್ಟಿತ್ತು. ಬೇಡಿಕೆ ಇಟ್ಟು ಇಷ್ಟು ದಿನಗಳು ಕಳೆದರೂ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಿರಲಿಲ್ಲ.

ಹೀಗಾಗಿ ರಾಜ್ಯ ಸರ್ಕಾರ  ಸುಪ್ರೀಂಕೋರ್ಟ್​ ಮೊರೆ ಹೋಗಿತ್ತು. ಬಳಿಕ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಸುಪ್ರೀಂಕೋರ್ಟ್​ನಲ್ಲಿ ಸೋಮವಾರದೊಳಗೆ ಒಪ್ಪಿಕೊಂಡಿತ್ತು. ಅದರಂತೆ ಇದೀಗ ಕೇಂದ್ರ ಸರ್ಕರ ಬರ ಪರಿಹಾರ ಘೋಷಣೆ ಮಾಡಿದೆ.