ಮನೆ ರಾಜ್ಯ ರಾಜ್ಯದಲ್ಲಿ ಇಂದು 348 ಮಂದಿಗೆ ಕೋವಿಡ್‌ ಪಾಸಿಟಿವ್‌

ರಾಜ್ಯದಲ್ಲಿ ಇಂದು 348 ಮಂದಿಗೆ ಕೋವಿಡ್‌ ಪಾಸಿಟಿವ್‌

0

ಬೆಂಗಳೂರು (Bengaluru)- ರಾಜ್ಯದಲ್ಲಿ ಕೋವಿಡ್‌ ಸೋಂಕಿನ ಪ್ರಕರಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 348 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 39,53,937ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

311 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 2,478 ಸಕ್ರಿಯ ಪ್ರಕರಣಗಳಿದೆ. ರಾಜ್ಯದಲ್ಲಿ ಸೋಂಕಿನ ಪ್ರಮಾಣ ಶೇ, 2.11 ರಷ್ಟಿದ್ದು, ಮರಣ ಪ್ರಮಾಣ ಶೂನ್ಯವಾಗಿದೆ. 

ಬೆಂಗಳೂರಿನಲ್ಲಿ  339 ಹೊಸ ಪ್ರಕರಣ ಪತ್ತೆಯಾಗಿದ್ದು, 277 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟಾರೇ 2,390 ಸಕ್ರಿಯ ಪ್ರಕರಣ ದಾಖಲಾಗಿದೆ.

ಹಾಸನ, ಕೋಲಾರ, ಮೈಸೂರು, ರಾಯಚೂರು, ತುಮಕೂರು, ಉತ್ತರ ಕನ್ನಡದಲ್ಲಿ ತಲಾ ಒಂದೊಂದು ಪ್ರಕರಣ ಪತ್ತೆಯಾಗಿದೆ. ಉಳಿದೆಲ್ಲಾ ಕಡೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. 

ಇಂದು ಒಟ್ಟು 16,474 ಮಾದರಿಗಳ ಪರೀಕ್ಷೆ ನಡೆಸಲಾಗಿದೆ. ಇದರೊಂದಿಗೆ ಇಲ್ಲಿಯವರೆಗೂ 66,48,7860 ಪರೀಕ್ಷೆ ನಡೆಸಲಾಗಿದೆ.