ಮನೆ ಅಪರಾಧ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 4 ಲಕ್ಷ ರೂ. ಗೂ ಅಧಿಕ ಹಣ ವಶಕ್ಕೆ

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 4 ಲಕ್ಷ ರೂ. ಗೂ ಅಧಿಕ ಹಣ ವಶಕ್ಕೆ

0

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಾಣೆ ಮಾಡುತ್ತಿದ್ದ 4 ಲಕ್ಷಕ್ಕೂ ಅಧಿಕ ನಗದನ್ನು ಪೊಲೀಸರು  ವಶಕ್ಕೆ ಪಡೆದಿದದ್ದಾರೆ.

Join Our Whatsapp Group

ಗುಂಡ್ಲುಪೇಟೆ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಪರಶಿವಮೂರ್ತಿ ನೇತೃತ್ವದಲ್ಲಿ ಪೊಲೀಸರು  ಕೆಕ್ಕನಹಳ್ಳ ಮತ್ತು ಮದ್ದೂರು ಚೆಕ್ ಪೋಸ್ಟ್ ನಲ್ಲಿ ತಪಾಸಣೆ ನಡೆಸಿ ಹಣ ವಶಕ್ಕೆ ಪಡೆದಿದ್ದಾರೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪೀಯ ಕೆಕ್ಕನಹಳ್ಳ  ಮದ್ದೂರು ವಲಯದ ಕೇರಳ ಸುಲ್ತಾನ್ ಭತ್ತೇರಿ ರಸ್ತೆಯ ಮದ್ದೂರು ಚೆಕ್ ಪೋಸ್ಟ್ ನಲ್ಲಿ  ವಶಕ್ಕೆ ಪಡೆಯಲಾಗಿದೆ.  ಕೇರಳದಿಂದ ದಾಖಲೆಯಿಲ್ಲದೆ 4 ಲಕ್ಷಕ್ಕೂ ಹೆಚ್ಚಿನ ಹಣವನ್ನು ಸಾಗಾಣೆ ಮಾಡುತ್ತಿದ್ದರು ಎನ್ನಲಾಗಿದೆ.  ಲೋಕಸಭಾ ಚುನಾವಣೆ ಹಿನ್ನೆಲೆ, ಚೆಕ್ ಪೋಸ್ಟ್ ಗಳಲ್ಲಿ ಬಿಗಿ ತಪಾಸಣೆ ಕೈಗೊಳ್ಳಲಾಗಿದೆ.

ಹಿಂದಿನ ಲೇಖನಅರ್ಧಕ್ಕಿಂತ ಹೆಚ್ಚಿನ ಸ್ಥಾನಗಳನ್ನ ಕರ್ನಾಟಕದಲ್ಲಿ ಬಿಜೆಪಿ ಪಡೆಯುತ್ತದೆ: ಎಸ್ ​ಎಲ್​ ಬೈರಪ್ಪ ಭವಿಷ್ಯ
ಮುಂದಿನ ಲೇಖನದಮನಿರ ವ್ಯಾಧಿ (ಕರೋನರಿ)(Coronary Artery Disease)