ಮನೆ ರಾಜಕೀಯ 40% ಕಮೀಷನ್ ಆರೋಪ: ರಾಜ್ಯ ಸರ್ಕಾರದ ವಿರುದ್ಧ ನಿಲುವಳಿ ಸೂಚನೆ ಮಂಡನೆಗೆ ಕಾಂಗ್ರೆಸ್ ತೀರ್ಮಾನ

40% ಕಮೀಷನ್ ಆರೋಪ: ರಾಜ್ಯ ಸರ್ಕಾರದ ವಿರುದ್ಧ ನಿಲುವಳಿ ಸೂಚನೆ ಮಂಡನೆಗೆ ಕಾಂಗ್ರೆಸ್ ತೀರ್ಮಾನ

0

ಬೆಂಗಳೂರು: ವಿಧಾನಮಂಡಲ ಅಧಿವೇಶನದಲ್ಲಿ 40 ಪರ್ಸೆಂಟ್ ಕಮೀಷನ್ ಆರೋಪ ಪ್ರಕರಣ ಕುರಿತು ರಾಜ್ಯ ಸರ್ಕಾರದ ವಿರುದ್ಧ ನಿಲುವಳಿ ಸೂಚನೆ ಮಂಡಿಸಲು ಕಾಂಗ್ರೆಸ್ ಮಂಗಳವಾರ ತೀರ್ಮಾನಿಸಿದೆ.

ಇಂದು ಸಂಜೆ ನಡೆದ ಪಕ್ಷದ ಹಿರಿಯ ನಾಯಕರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ. 

ಅಲ್ಲದೆ ಬಜೆಟ್ ಅಧಿವೇಶನದಲ್ಲಿ ಕೆಲವೊಂದು ಇಲಾಖೆ ಹಾಗೂ ಸಚಿವರ ಕಾರ್ಯವೈಖರಿ, ವೈಫಲ್ಯ  ಪ್ರಸ್ತಾಪಿಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಬಗ್ಗೆಯೂ ಚರ್ಚೆಯಾಯಿತು ಎನ್ನಲಾಗಿದೆ.

ಪ್ರತಿಪಕ್ಷ ನಾಯಕರಾದ ಸಿದ್ದರಾಮಯ್ಯ, ಹರಿಪ್ರಸಾದ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಸೇರಿ ಹಿರಿಯ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಹಿಂದಿನ ಲೇಖನಇಂದಿನಿಂದ 12-14 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ಅಭಿಯಾನ ಆರಂಭ
ಮುಂದಿನ ಲೇಖನಉಪ ತಹಶೀಲ್ದಾರ್ ಮನೆ ಮೇಲೆ ಎಸಿಬಿ ದಾಳಿ: 450 ಗ್ರಾಂ. ಚಿನ್ನ ಪತ್ತೆ