ಬೆಂಗಳೂರು(Bengaluru): ರಾಜ್ಯದಲ್ಲಿ ಚರ್ಚೆಗೆ ಕಾರಣವಾಗಿದ್ದ 40 % ಕಮೀಷನ್ ಆರೋಪ ಮತ್ತೊಂದು ತಿರುವು ಪಡೆದುಕೊಂಡಿದ್ದು, ಪ್ರಧಾನಿ ಕಾರ್ಯಾಲಯ ಮಧ್ಯ ಪ್ರವೇಶಿಸಿದೆ.
ರಾಜ್ಯ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪಿಸಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ದಾಖಲೆ ಸಲ್ಲಿಸುವಂತೆ ಪ್ರಧಾನಿ ಕಾರ್ಯಾಲಯ ಸೂಚನೆ ನೀಡಿದೆ.
ಬೆಂಗಳೂರಿನಲ್ಲಿರುವ ಕೇಂದ್ರ ಗೃಹ ಇಲಾಖೆ ಅಧಿಕಾರಿಗಳನ್ನು ಭೇಟಿ ಮಾಡಿ ದಾಖಲೆ ಸಲ್ಲಿಸಲು ಸೂಚಿಸಲಾಗಿದ್ದು, ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಇಂದು ದಾಖಲೆ ಸಲ್ಲಿಸಲಿದ್ದಾರೆ.