ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 415 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 3,956,749ಕ್ಕೆ ಏರಿಕೆಯಾಗಿದೆ.
ಸೋಂಕಿನಿಂದ ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40,066 ಇದೆ. 378 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 3,912,953ಕ್ಕೆ ಏರಿಕೆಯಾಗಿದೆ. ಇನ್ನು 3,688 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ 400 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 1,792,140ಕ್ಕೆ ಏರಿಕೆಯಾಗಿದೆ.