ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 471 ಕೋವಿಡ್ ಸೋಂಕಿನ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 39, 54,784ಕ್ಕೆ ಏರಿಕೆಯಾಗಿದೆ.
ಯಾವುದೇ ಸಾವಿನ ಪ್ರಕರಣ ವರದಿಯಾಗಿಲ್ಲ. ರಾಜ್ಯದಲ್ಲಿ ಸೋಂಕಿನ ಪ್ರಮಾಣ ಶೇ, 2.14 ರಷ್ಟಿದ್ದು, ಮರಣ ಪ್ರಮಾಣ ಶೂನ್ಯವಾಗಿದೆ.
214 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಸದ್ಯ 2,880 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ 458 ಹೊಸ ಪ್ರಕರಣ ಪತ್ತೆಯಾಗಿದ್ದು, 208 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟಾರೇ 2,776 ಸಕ್ರಿಯ ಪ್ರಕರಣ ಇದೆ. ಉಡುಪಿ, ಕಲಬುರಗಿಗಳಲ್ಲಿ ತಲಾ ಒಂದೊಂದು ಪ್ರಕರಣ ಪತ್ತೆಯಾಗಿದೆ. ಉಳಿದೆಲ್ಲಾ ಕಡೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.
ಒಟ್ಟು 21,927 ಮಾದರಿಗಳ ಪರೀಕ್ಷೆ ನಡೆಸಲಾಗಿದೆ. ಇದರೊಂದಿಗೆ ಇಲ್ಲಿಯವರೆಗೂ 66,53,3033 ಪರೀಕ್ಷೆ ನಡೆಸಲಾಗಿದೆ.















