ವಿಜಯಪುರ: ಮಹಾರಾಷ್ಟ್ರದ ಸೋಲಾಪುರಗೆ ಹೊರಟಿದ್ದ ಲಾರಿಯಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 49.90 ಲಕ್ಷ ರೂ. ಹಣವನ್ನು ಚೆಕ್ ಪೋಸ್ಟ್ ನಲ್ಲಿ ವಶಕ್ಕೆ ಪಡೆದಿದ್ದಾರೆ.
ಜಿಲ್ಲೆಯ ಇಂಡಿ ತಾಲೂಕಿನ ಝಳಕಿ ಚೆಕ್ ಪೋಸ್ಟ್ ನಲ್ಲಿ ರಾಷ್ಟ್ರೀಯ ಹೆದ್ದಾರಿ-50 ರಲ್ಲಿ ಸಂಚರಿಸುತ್ತಿದ್ದ ಲಾರಿಯನ್ನು ಪರಿಶೀಲಿಸುತ್ತಿದ್ದಾಗ ದಾಖಲೆ ಇಲ್ಲದ 49.90 ಲಕ್ಷ ರೂ. ನಗದು ಹಣ ಪತ್ತೆಯಾಗಿದೆ.
ಪ್ರಕರಣದ ಸಂಬಂಧ ಬೆಂಗಳೂರು ಮೂಲದ ಸೈಯದ್, ಜಮೀಲ್ ಹಾಗೂ ರಂಗಸ್ವಾಮಿ ಎಂಬ ಮೂವರನ್ನು ನಗದು ಸಹಿತ ವಶಕ್ಕೆ ಪಡೆಯಲಾಗಿದೆ.
ವಶಕ್ಕೆ ಪಡೆದಿದ್ದ ಮೂವರ ವಿರುದ್ಧ ಝಳಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.














