ಶ್ರೀನಗರ: ಕೇಂದ್ರಾಡಳಿತ ಪ್ರದೇಶ ಲಡಾಖ್ ನಲ್ಲಿ ಮಂಗಳವಾರ ಬೆಳಗ್ಗೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 5.2ರಷ್ಟು ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪ ಕೇಂದ್ರ (ಎನ್ ಸಿಎಸ್) ತಿಳಿಸಿದೆ.
ಕಾರ್ಗಿಲ್ ನ ವಾಯವ್ಯಕ್ಕೆ 148 ಕಿಮೀ ದೂರದಲ್ಲಿ ಕಂಪನದ ಆಳವು ಭೂಮಿಯ ಮೇಲ್ಮೈಯಿಂದ 10 ಕಿ.ಮೀ ಕೆಳಗೆ ದಾಖಲಾಗಿದೆ. ಭೂಕಂಪನದ ಹೊರತಾಗಿಯೂ, ಯಾವುದೇ ಹಾನಿಯ ಬಗ್ಗೆ ವರದಿಗಳು ಬಂದಿಲ್ಲ.
ಮಂಗಳವಾರ ಜಮ್ಮುವಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 11.30ಕ್ಕೆ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಲಿದ್ದಾರೆ.