ಮನೆ ಕಾನೂನು ರಾಜ್ಯ ಸರ್ಕಾರಕ್ಕೆ 5 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್

ರಾಜ್ಯ ಸರ್ಕಾರಕ್ಕೆ 5 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್

0

ಬೆಂಗಳೂರು:   ಬೆಂಗಳೂರಿನಲ್ಲಿ ಸಾರ್ವಜನಿಕ ಶೌಚಾಲಯಗಳ ನಿರ್ವಹಣೆ ಕೊರತೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ 5 ಲಕ್ಷ ರೂ. ದಂಡ ವಿಧಿಸಿದೆ.

ಬೆಂಗಳೂರು ನಗರದಲ್ಲಿ ಸಾರ್ವಜನಿಕ ಶೌಚಾಲಯಗಳನಿರ್ವಹಣೆ ಕೊರತೆಗೆ ಕೈಗೊಂಡ ಕ್ರಮದ ಬಗ್ಗೆ ಹೈಕೋರ್ಟ್​ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದ್ದು, ಸರ್ಕಾರದ ನಿರ್ಲಕ್ಷ್ಯಕ್ಕೆ ಹೈಕೋರ್ಟ್ 5 ಲಕ್ಷ ರೂಪಾಯಿ ದಂಡ ವಿಧಿಸಿದೆ.

ಸಿಜೆ ಪ್ರಸನ್ನ ಬಿ.ವರಾಳೆ, ನ್ಯಾ.ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಪೀಠ ಆದೇಶಿಸಿದ್ದು, ನವೆಂಬರ್​ 2ರಂದು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಖುದ್ದು ಹಾಜರಾಗುವಂತೆ ಹೈಕೋರ್ಟ್ ಸೂಚನೆ ನೀಡಿದೆ.

ಲೆಟ್ಜ್ ಕಿಟ್ ಫೌಂಡೇಶನ್ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ಮಾಡಿರುವ ಹೈಕೋರ್ಟ್​ ಬೆಂಗಳೂರಿನ ನಿವಾಸಿಗಳ ಬಗ್ಗೆ ಸರ್ಕಾರ ಜವಾಬ್ದಾರಿಯುತವಾಗಿರಬೇಕು. ಶೌಚಾಲಯಗಳ ನಿರ್ಮಾಣ, ‌ನೈರ್ಮಲ್ಯದ ಬಗ್ಗೆ ವರದಿಗೆ ಸೂಚಿಸಿತ್ತು. ಆದರೆ ವರದಿ ಸಲ್ಲಿಸಿಲ್ಲವೆಂದು ಅರ್ಜಿದಾರರ ಪರ ಹಿರಿಯ ವಕೀಲ ಪುತ್ತಿಗೆ ರಮೇಶ್ ವಾದ ಮಂಡಿಸಿದ್ದಾರೆ.