ಮನೆ ರಾಜ್ಯ ಬಾಕಿ ಇರುವ ವಾಹನ ಸಂಚಾರ ದಂಡ ಮೊತ್ತ ಪಾವತಿಗೆ ಶೇ.50ರಷ್ಟು ರಿಯಾಯಿತಿ

ಬಾಕಿ ಇರುವ ವಾಹನ ಸಂಚಾರ ದಂಡ ಮೊತ್ತ ಪಾವತಿಗೆ ಶೇ.50ರಷ್ಟು ರಿಯಾಯಿತಿ

0

ಬೆಂಗಳೂರು: ಇ-ಚಲನ್ ಪ್ರಕರಣಗಳೆಂದು ಕರೆಯಲ್ಪಡುವ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕಾಗಿ ವಿಧಿಸಿರುವ ದಂಡದ ಮೊತ್ತ ಬಾಕಿ ಇರುವ ಪ್ರಕರಣಗಳಲ್ಲಿ ಶೇ.50ರಷ್ಟು ರಿಯಾಯಿತಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ (ಕೆಎಸ್‌’ಎಲ್‌’ಎಸ್‌’ಎ)ದ ಕಾರ್ಯನಿರ್ವಾಹಕ ಅಧ್ಯಕ್ಷರು ಹಾಗೂ ನ್ಯಾಯಮೂರ್ತಿಗಳಾದ ಬಿ.ವೀರಪ್ಪ ಅವರ ಅಧ್ಯಕ್ಷತೆಯಲ್ಲಿ ಜನವರಿ 27ರಂದು ನಡೆದಂತಹ ಸಭೆಯಲ್ಲಿ ತೆಗೆದುಕೊಂಡಿರುವ ನಿರ್ಧಾರದ ಪ್ರಕಾರ ರಾಜ್ಯ ಸರ್ಕಾರವು ಈ ಆದೇಶ ಹೊರಡಿಸಿದೆ.

ಫೆಬ್ರವರಿ 11 ರಂದು ನಡೆಯಲಿರುವ ಲೋಕ ಅದಾಲತ್ ನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಈ ಸಂಬಂಧ ಸಾರಿಗೆ ಇಲಾಖೆಗೆ ಸಾಧ್ಯವಾದಷ್ಟು ಶೀಘ್ರವಾಗಿ ಕ್ರಮಗಳನ್ನು ಕೈಗೊಳ್ಳುವಂತೆ ಸಭೆಯಲ್ಲಿ ಸೂಚಿಸಲಾಯಿತು.