ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿನ ಅಬ್ಬರ ದಿನದಿಂದ ದಿನಕ್ಕೆ ಕುಂಠಿತಗೊಳ್ಳುತ್ತಿದ್ದು, ಕಳೆದ 24 ಗಂಟೆಗಳಲ್ಲಿ 50,407 ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 804 ಮಂದಿ ಸಾವನ್ನಪ್ಪಿದ್ದಾರೆ.
ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,25,86,544ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,04,866ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 6,10,443ಕ್ಕೆ ತಲುಪಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 1,36,962 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,14,68,120ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ 14,91,678 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 74,78,70,047 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ. ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ1,72,29,47,688 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.