ಮನೆ ರಾಜ್ಯ ಮೂಲ ಸೌಕರ್ಯಕ್ಕಾಗಿ 500 ಕೋಟಿ: ಸಿಎಂ ಬೊಮ್ಮಾಯಿ

ಮೂಲ ಸೌಕರ್ಯಕ್ಕಾಗಿ 500 ಕೋಟಿ: ಸಿಎಂ ಬೊಮ್ಮಾಯಿ

0

ಉಡುಪಿ(Udupi):  ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಹಾನಿಗೊಳಗಾಗಿರುವ ರಸ್ತೆಗಳ ಅಭಿವೃದ್ಧಿ, ವಿದ್ಯುತ್ ಸಂಪರ್ಕ, ಸಣ್ಣ ಸೇತುವೆಗಳು ಮರುಸ್ಥಾಪನೆ ಹಾಗೂ ತುರ್ತು ಕಾರ್ಯಗಳಿಗೆ ₹500 ಕೋಟಿ ಬಿಡುಗಡೆ ಮಾಡುವುದಾಗಿ ಘೋಷಿಸಿದರು.

ಉಡುಪಿಯಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ತಕ್ಷಣ ಮೂಲಸೌಕರ್ಯಗಳ ಮರು ಸ್ಥಾಪನೆ ಮಾಡುವ ಉದ್ದೇಶದಿಂದ ₹ 500 ಕೋಟಿ ಹಣವನ್ನು ಬಳಕೆ ಮಾಡಿಕೊಳ್ಳಲಾಗುವುದು. ಎಲ್ಲ ಜಿಲ್ಲೆಗಳಿಂದ ಮಳೆ ಹಾನಿ ವರದಿ ತರಿಸಿಕೊಳ್ಳಲಾಗುತ್ತಿದ್ದು, ಎನ್‌ಡಿಆರ್‌ಎಫ್‌ ಅಡಿಯಲ್ಲಿ ಕೇಂದ್ರದಿಂದ ಹೆಚ್ಚಿನ ನೆರವು ಕೋರಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

ರಾಜ್ಯದಲ್ಲಿ ಮಳೆ ಅನಾಹುತ: 32 ಮಂದಿ ಸಾವು, 355 ಹೆಕ್ಟೇರ್ ಬೆಳೆ ನಾಶ: ರಾಜ್ಯದಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಇಲ್ಲಿಯವರೆಗೆ 32 ಮಂದಿ ಸಾವನ್ನಪ್ಪಿದ್ದು, 5 ಕಾಣೆಯಾಗಿದ್ದಾರೆ. 34 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿಸಿದರು.

ಪ್ರಸಕ್ತ ವರ್ಷದಲ್ಲಿ ಜುಲೈ ತಿಂಗಳಿನಲ್ಲಿ ಭಾರಿ ಮಳೆಯಾಗಿದೆ. ಮಳೆಯಿಂದ ಸಂಕಷ್ಟಕ್ಕೆ ಸಿಲುಕಿದ್ದ 300 ಮಂದಿಯನ್ನು ರಕ್ಷಿಸಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳ 355 ಹೆಕ್ಟರ್ ಬೆಳೆ ನಾಶವಾಗಿದ್ದು,  1,062 ಮನೆಗಳಿಗೆ ಹಾನಿಯಾಗಿದೆ. ರಾಜ್ಯದ ವಿವಿಧೆಡೆ 14 ಪರಿಹಾರ ಶಿಬಿರಗಳನ್ನು ಆರಂಭಿಸಲಾಗಿದೆ. 4 ರಾಷ್ಟ್ರೀಯ ವಿಪತ್ತು ರಕ್ಷಣಾ ತಂಡಗಳು, 4 ರಾಜ್ಯ ವಿಪತ್ತು ರಕ್ಷಣಾ ತಂಡಗಳು ಕಾರ್ಯನಿರ್ವಹಿಸುತ್ತಿವೆ. ಜುಲೈ ತಿಂಗಳಲ್ಲಿ ನಾಲ್ಕು ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ  ಎಂದು ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  429, ಉತ್ತರ ಕನ್ನಡ 437 ಉಡುಪಿಯಲ್ಲಿ 296 ಮನೆಗ ಕುಸಿದಿವೆ. ಕರಾವಳಿಯಲ್ಲಿ 2187 ರಸ್ತೆಗಳು ಹಾನಿಗೊಳಗಾಗಿದ್ದು, 168 ಸೇತುವೆ ಹಾಳಾಗಿವೆ. ಮನೆ ಬಿದ್ದ ತಕ್ಷಣ 10 ಸಾವಿರ ಪರಿಹಾರಕ್ಕೆ  ಸೂಚನೆ ನೀಡಲಾಗಿದೆ.  ಮನೆ ಕುಸಿದರೆ 5 ಲಕ್ಷ ಪರಿಹಾರ ನೀಡುತ್ತೇವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.