ಮನೆ ರಾಜ್ಯ ನೆರೆ ಪರಿಹಾರ ಕಾರ್ಯಕ್ಕೆ 500 ಕೋಟಿ ರೂ. ಬಿಡುಗಡೆ: ಬಸವರಾಜ ಬೊಮ್ಮಾಯಿ

ನೆರೆ ಪರಿಹಾರ ಕಾರ್ಯಕ್ಕೆ 500 ಕೋಟಿ ರೂ. ಬಿಡುಗಡೆ: ಬಸವರಾಜ ಬೊಮ್ಮಾಯಿ

0
https://www.youtube.com/channel/UCmDoYGj_oDaxpT_t7Pa9iEQ

ಕಾರವಾರ (Karavara): ನೆರೆಯಿಂದಾಗಿ ಹಾನಿಗೀಡಾದ ಪ್ರದೇಶಗಳಲ್ಲಿ ತುರ್ತು ಪರಿಹಾರ ಕಾರ್ಯಗಳಿಗೆ ತಕ್ಷಣವೇ 500 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಭಟ್ಕಳ ತಾಲ್ಲೂಕಿನ ಮುಟ್ಟಳ್ಳಿ ಗ್ರಾಮದಲ್ಲಿ ಭೂ ಕುಸಿತವಾಗಿ ನಾಲ್ವರು ಮೃತಪಟ್ಟ ಪ್ರದೇಶಕ್ಕೆ ಬುಧವಾರ ಭೇಟಿ ನೀಡಿ, ಪರಿಶೀಲನೆ ನಡೆಸಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಭೂಕುಸಿತವಾದ ಪ್ರದೇಶಗಳ ಜಿಯಾಲಜಿಕಲ್ ಸರ್ವೆ ಮಾಡಿಸಲಾಗುವುದು. ಮುಟ್ಟಳ್ಳಿಯಲ್ಲಿ ಮೃತಪಟ್ಟ ನಾಲ್ವರ ಕುಟುಂಬಕ್ಕೆ ಒಟ್ಟು  20 ಲಕ್ಷ ರೂ. ಪರಿಹಾರ ವಿತರಿಸಲಾಗಿದೆ. ಮಕ್ಕಳ ಸ್ನಾತಕೋತ್ತರ ವಿದ್ಯಾಭ್ಯಾಸದ ತನಕ ಸರ್ಕಾರವೇ ಸಂಪೂರ್ಣ ಜವಾಬ್ದಾರಿ ವಹಿಸಲಿದೆ. ಭೂಕುಸಿತವಾಗಿ ನೆಲಸಮವಾದ ಮನೆಯ ಕುಟುಂಬದವರ ವಾಸ್ತವ್ಯಕ್ಕೆ ಪರ್ಯಾಯ ವ್ಯವಸ್ಥೆ ಮಾಡಲು ಜಿಲ್ಲಾಧಿಕಾರಿಗೇ ಸೂಚಿಸಲಾಗಿದೆ ಎಂದು ಪ್ರಕಟಿಸಿದರು.

ಈವರೆಗಿನ ಮಾಹಿತಿಯ ಪ್ರಕಾರ, 14 ಜಿಲ್ಲೆಗಳಲ್ಲಿ ಮಳೆಯಿಂದ ಹಾನಿಯಾದ ವರದಿಯಿದೆ. ಉತ್ತರ ಕನ್ನಡ ಹಾಗೂ ತುಮಕೂರು ಜಿಲ್ಲೆಗಳಲ್ಲಿ ತಲಾ ನಾಲ್ವರು, ವಿಜಯನಗರ ಜಿಲ್ಲೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಸುಮಾರು 600 ಮನೆಗಳು ಸಂಪೂರ್ಣವಾಗಿ ನಾಶವಾಗಿವೆ. 21,471 ಹೆಕ್ಟೇರ್‌ಗಳಷ್ಟು ಕೃಷಿ ಪ್ರದೇಶ ಹಾನಿಯಾಗಿದೆ ಎಂದು ತಿಳಿಸಿದರು.

ಸಿದ್ದರಾಮಯ್ಯ ಅವರ 75ನೇ ಜನ್ಮದಿನಾಚರಣೆ ಸಮಾರಂಭದ ಬಗ್ಗೆ ಪ್ರತಿಕ್ರಿಯಿಸಿ, ಅವರಿಗೆ 75 ವರ್ಷವಾಗಿದ್ದು ವೈಯಕ್ತಿಕವಾಗಿ ನನಗೆ ಸಂತಸ ಕೊಟ್ಟಿದೆ. ದೀರ್ಘ ಕಾಲ ಬಾಳಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ರಾಜ್ಯದ ಜನ ಪ್ರವಾಹದಿಂದ ಸಾವು, ನೋವಿನ ಸಂಕಷ್ಟದಲ್ಲಿರುವ ಈ ಸಂದರ್ಭದಲ್ಲಿ ವೈಯಕ್ತಿಕ ಉತ್ಸವಗಳು ಬೇಕೇ ಎಂಬ ಪ್ರಶ್ನೆಗೆ ಅವರೇ ಉತ್ತರಿಸಬೇಕು ಎಂದರು.

ಹಿಂದಿನ ಲೇಖನರಾಷ್ಟ್ರಧ್ವಜ ಉತ್ಪಾದನಾ ಕೇಂದ್ರಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ
ಮುಂದಿನ ಲೇಖನಕೊಡಗಿನಲ್ಲಿ ಮತ್ತೊಂದು ಕಾಡಾನೆ ಸಾವು