ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣ ವಿಚಾರಕ್ಕೆ ಸಂಬಂಧಿಸಿದ ಇದೀಗ 50:50 ಅನುಪಾತದಲ್ಲಿ ಯಾರಿಗೆಲ್ಲ ಮುಡಾ ಸೈಟ್ಗಳನ್ನು ಹಂಚಿಕೆ ಮಾಡಲಾಗಿತ್ತು ಎಂಬ ವಿವರ ಬಹಿರಂಗವಾಗಿದೆ. ಮುಡಾ ನಿವೇಶನ ಪಡೆದವರ ಪಟ್ಟಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು 50:50 ಅನುಪಾತದಲ್ಲಿ ನಿವೇಶನ ಪಡೆದ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ನಂತರ ಅವರು ಸೈಟ್ ಗಳನ್ನು ಹಿಂದಿರುಗಿಸಿದ್ದರು. ಏತನ್ಮಧ್ಯೆ, ಸಿಎಂ ಸಿದ್ದರಾಮಯ್ಯ ಅವರನ್ನು ಲೋಕಾಯುಕ್ತ ವಿಚಾರಣೆಗೂ ಒಳಪಡಿಸಿದೆ. ಮತ್ತೊಂದೆಡೆ, ಜಾರಿ ನಿರ್ದೇಶನಾಲಯ ಕೂಡ ಹಗರಣದ ತನಿಖೆ ಆರಂಭಿಸಿದೆ.
ಈ ಬೆನ್ನಲ್ಲೆ ಮುಡಾದಿಂದ ಯಾರಿಗೆ ಎಷ್ಟು ಮುಡಾ ಸೈಟ್ಗಳನ್ನು ಹಂಚಿಕೆ ಮಾಡಲಾಗಿತ್ತು ಎಂಬ ಮಾಹಿತಿಯುಳ್ಳ ದಾಖಲೆಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.