ಮನೆ ರಾಜ್ಯ ರಾಜ್ಯದಲ್ಲಿ 530 ಮಂದಿಗೆ ಕೋವಿಡ್ ಪಾಸಿಟಿವ್

ರಾಜ್ಯದಲ್ಲಿ 530 ಮಂದಿಗೆ ಕೋವಿಡ್ ಪಾಸಿಟಿವ್

0

ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 530 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,61,361ಕ್ಕೆ ಏರಿಕೆಯಾಗಿದೆ.

ಸೋಂಕಿನಿಂದಾಗಿ ಯಾವುದೇ ಸಾವು ಸಂಭವಿಸಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40,071 ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

637 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,16,320ಕ್ಕೆ ಏರಿಕೆಯಾಗಿದೆ. ಇನ್ನು 5,928 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ 494 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,96,536ಕ್ಕೆ ಏರಿಕೆಯಾಗಿದೆ.

ಹಿಂದಿನ ಲೇಖನನಾಡದೇವತೆ ಚಾಮುಂಡೇಶ್ವರಿಯ ದರ್ಶನ ಪಡೆದ ಪ್ರಧಾನಿ ಮೋದಿ
ಮುಂದಿನ ಲೇಖನಇಂದಿನ ರಾಶಿ ಭವಿಷ್ಯ