ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಕೋವಿಡ್ ದೃಢಪಟ್ಟ 5,676 ಪ್ರಕರಣಗಳು ಪತ್ತೆಯಾಗಿದ್ದು, ಹಿಂದಿನ ದಿನಕ್ಕೆ ಹೋಲಿಸಿಕೊಂಡರೆ ಸೋಂಕು ಪ್ರಕರಣಗಳಲ್ಲಿ ತುಸು ಇಳಿಕೆಯಾಗಿದೆ.
ಸೋಮವಾರ ದೇಶದಲ್ಲಿ 5,888 ಪ್ರಕರಣಗಳು ಪತ್ತೆಯಾಗಿದ್ದವು. ಇನ್ನು ದೇಶದಲ್ಲಿ 37,093 ರಷ್ಟು ಸಕ್ರಿಯ ಕೋವಿಡ್ ಪ್ರಕರಣಗಳಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಪ್ರಕಟಣೆ ಬಿಡುಗಡೆ ಮಾಡಿದೆ.
ಕೋವಿಡ್ ಹೆಚ್ಚಳದ ಹಿನ್ನೆಲೆಯಲ್ಲಿ ಸೋಮವಾರ ದೇಶದ ಹಲವು ಸಾರ್ವಜನಿಕ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸನ್ನದ್ಧತೆಯನ್ನು ಪರಿಶೀಲಿಸಲು ಅಣಕು ಕಾರ್ಯಾಚರಣೆ ನಡೆಸಲಾಗಿತ್ತು.
ದೇಶದಲ್ಲಿ ಕೋವಿಡ್ ನಿರಂತರವಾಗಿ ಹೆಚ್ಚಳವಾಗುತ್ತಿರುವುದಕ್ಕೆ ಮೂರು ಮುಖ್ಯ ಕಾರಣಗಳನ್ನು ಭಾರತೀಯ ವೈದ್ಯಕೀಯ ಸಂಘ (ಐಎಂಎ) ಬಹಿರಂಗಪಡಿಸಿತ್ತು.
1. ಕೋವಿಡ್–19ಗೆ ಸಂಬಂಧಿಸಿದ ಸೂಕ್ತ ನಡವಳಿಕೆಯಲ್ಲಿನ ಸಡಿಲಿಕೆ
2. ಸೋಂಕು ಪತ್ತೆ ಪರೀಕ್ಷೆ ಕಡಿಮೆಯಾಗಿರುವುದು
3. ಕೊರೊನಾ ವೈರಸ್’ನ ಹೊಸ ರೂಪಾಂತರಿ ತಳಿ… ಸೋಂಕು ಉಲ್ಬಣಕ್ಕೆ ಕಾರಣ ಎನ್ನಲಾಗುತ್ತಿದೆ.