ಮನೆ ಆರೋಗ್ಯ 5921 ಹೊಸ ಕೊರೊನಾ ಪ್ರಕರಣ ಪತ್ತೆ

5921 ಹೊಸ ಕೊರೊನಾ ಪ್ರಕರಣ ಪತ್ತೆ

0

ನವದೆಹಲಿ: ದೇಶದಲ್ಲಿ ಕಳೆದ 24 ತಾಸಿನಲ್ಲಿ 5,921 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಇದೇ ಅವಧಿಯಲ್ಲಿ 11,651 ಮಂದಿ ಚೇತರಿಸಿಕೊಂಡಿದ್ದು, 289 ಮಂದಿ ಮೃತಪಟ್ಟಿದ್ದಾರೆ.ದೇಶದಲ್ಲಿ 63,878 ಸಕ್ರಿಯ ಪ್ರಕರಣಗಳಿವೆ. ದೈನಂದಿನ ಕೋವಿಡ್ ದೃಢ ಪ್ರಮಾಣ ಶೇ 0.63ರಷ್ಟಿದೆ.ದೇಶದಲ್ಲಿ ಇದುವರೆಗೆ ಒಟ್ಟು 4,23,78,721 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಮೃತಪಟ್ಟವರ ಸಂಖ್ಯೆ 5,14,878ಕ್ಕೆ ತಲುಪಿದೆ.ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟಲು ಲಸಿಕಾ ಅಭಿಯಾನವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಗಿದ್ದು, ಇದುವರೆಗೆ 178.55 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ.