ಮನೆ ರಾಜ್ಯ 5, 8, 9ನೇ ತರಗತಿಯ ಮೌಲ್ಯಾಂಕನ ಪರೀಕ್ಷೆ ವೇಳಾಪಟ್ಟಿ ಪ್ರಕಟ

5, 8, 9ನೇ ತರಗತಿಯ ಮೌಲ್ಯಾಂಕನ ಪರೀಕ್ಷೆ ವೇಳಾಪಟ್ಟಿ ಪ್ರಕಟ

0

ಬೆಂಗಳೂರು: 5, 8, 9ನೇ ತರಗತಿಗೆ ಮೌಲ್ಯಾಂಕನ ಪರೀಕ್ಷೆ   ನಡೆಸಲು ಕರ್ನಾಟಕ ಶಿಕ್ಷಣ ಇಲಾಖೆ ವೇಳಾಪಟ್ಟಿ ಪ್ರಕಟಿಸಿದೆ.

ಮಾರ್ಚ್‌ 25 ರಿಂದ ಬಾಕಿ ವಿಷಯಗಳಿಗೆ 28ರ ವರೆಗೆ ಪರೀಕ್ಷೆಗಳು ನಡೆಯಲಿವೆ. ಎಸ್ ​ಎಸ್ ​ಎಲ್​ ಸಿ ಪರೀಕ್ಷೆ ಇಲ್ಲದ ದಿನ ಬೆಳಿಗ್ಗೆ ಬೋರ್ಡ್​ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಪ್ಲಾನ್​ ಮಾಡಿದೆ. ಇನ್ನು, ಉಳಿದ ದಿನ ಮಧ್ಯಾಹ್ನ ಅವಧಿಯಲ್ಲೇ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ.

ಮಾರ್ಚ್ 25ನೇ ತಾರೀಕಿನಿಂದ ಎಸ್​ಎಸ್​ಎಲ್​ಸಿ ವಾರ್ಷಿಕ ಪರೀಕ್ಷೆಗಳು ಆರಂಭವಾಗುತ್ತಿದ್ದು, ಎಸ್​ಎಸ್​ಎಲ್​ಸಿ ಪರೀಕ್ಷೆಗಳಿರುವ ದಿನಾಂಕ 25-3-24ರ ಸೋಮವಾರ ಮತ್ತು 27-3-24ರ ಬುಧವಾರದಂದು ಮಧ್ಯಾಹ್ನದ ಅವಧಿಯಲ್ಲಿ ಹಾಗೂ ಎಸ್ ​ಎಸ್​ ಎಲ್ ​ಸಿ ಪರೀಕ್ಷೆಗಳು ಇಲ್ಲದಿರುವ ದಿನಾಂಕ 26-3-24 ರ ಮಂಗಳವಾರ ಮತ್ತು 28-3-24 ರ ಗುರುವಾರದಂದು ಬೆಳಗಿನ ಅವಧಿಯಲ್ಲಿ 5, 8 ಮತ್ತು 9ನೇ ತರಗತಿಯ ಮೌಲ್ಯಾಂಕವನ್ನು ನಡೆಸಲಾಗುತ್ತದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 5, 8 ಮತ್ತು 9ನೇ ತರಗತಿಗಳ ವಿದ್ಯಾರ್ಥಿಗಳಿಗೆ 2023-24ನೇ ಸಾಲಿನ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಮೌಲ್ಯಾಂಕನ ನಡೆಸುವ ಸಂಬಂಧ ಮಾನ್ಯ ಸರ್ವೋಚ್ಛ ನ್ಯಾಯಾಲಯದಲ್ಲಿ ಎಸ್.ಎಲ್.ಪಿ ಸಂಖ್ಯೆ: 6256/2024, ಎಸ್.ಎಲ್.ಪಿ ಸಂಖ್ಯೆ: 6257/2024 ಮತ್ತು ಡೈರಿ ಸಂಖ್ಯೆ: 11192/2024 ದಾವೆಗಳನ್ನು ಹೂಡಿದ್ದು, ಸದರಿ ದಾವೆಗಳನ್ನು ವಿಚಾರಣೆ ನಡೆಸಿ, ಈ ಹಿಂದೆ ರಾಜ್ಯ ಉಚ್ಛ ನ್ಯಾಯಾಲಯದ ದ್ವಿಸದಸ್ಯ ಪೀಠವು ಮೌಲ್ಯಾಂಕನವನ್ನು ಮುಂದುವರೆಸುವಂತೆ ನೀಡಿದ್ದ ಮಧ್ಯಂತರ ತೀರ್ಪನ್ನು ರದ್ದುಪಡಿಸಿರುತ್ತದೆ ಮತ್ತು ಪ್ರಕರಣವನ್ನು ರಾಜ್ಯ ಉಚ್ಛ ನ್ಯಾಯಾಲಯ ವಿಭಾಗೀಯ ಪೀಠಕ್ಕೆ ರವಾನಿಸಿತ್ತು.

ಈ ಹಿನ್ನೆಲೆಯಲ್ಲಿ ದಿನಾಂಕ: 13-3-2024ರಿಂದ ನಡೆಯಬೇಕಾಗಿದ್ದ 5.8 ಮತ್ತು 9ನೇ ತರಗತಿಗಳ SA-2 ಮೌಲ್ಯಾಂಕನವನ್ನು ಮುಂದಿನ ಆದೇಶದವರೆಗೆ ಮುಂದೂಡುವಂತೆ ಶಾಲೆಗಳಿಗೆ ಸೂಚಿಸಲಾಗಿತ್ತು. ಮುಂದುವರೆದು, ರಾಜ್ಯ ಘನ ಉಚ್ಛ ನ್ಯಾಯಾಲಯದ ವಿಭಾಗೀಯ ಪೀಠವು ಸದರಿ ದಾವೆಯ ಪ್ರಕರಣವನ್ನು ವಿಚಾರಣೆ ನಡೆಸಿ ದಿನಾಂಕ: 22-3-2024ರಂದು ಅಂತಿಮ ತೀರ್ಪು ನೀಡಿದ್ದು, 5, 8 ಮತ್ತು 9ನೇ ತರಗತಿಗಳು 2023-24ನೇ ಸಾಲಿನ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಮೌಲ್ಯಾಂಕನ ಕಾರ್ಯವನ್ನು ಉಳಿದ ವಿಷಯಗಳಿಗೆ ಮುಂದುವರೆಸಲು ಸೂಚಿಸಿ ಆದೇಶಿಸಿರುತ್ತದೆ. ಅದರಂತೆ ಸದರಿ ಮೌಲ್ಯಾಂಕನ ಕಾರ್ಯವನ್ನು ವಿದ್ಯಾರ್ಥಿಗಳ ಅಭ್ಯಾಸದ ಹಿತದೃಷ್ಟಿಯಿಂದ ದಿನಾಂಕ: 25-3-2024ರಿಂದ ಪ್ರಾರಂಭಿಸಲು ಕ್ರಮವಹಿಸಲಾಗಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

5, 8, 9ನೇ ತರಗತಿಗೆ ಮೌಲ್ಯಾಂಕನ ಪರೀಕ್ಷೆ ವೇಳಾಪಟ್ಟಿ

5ನೇ ತರಗತಿ

ಮಾರ್ಚ್ 25- ಪರಿಸರ ಅಧ್ಯಯನ

ಮಾರ್ಚ್ 26- ಗಣಿತ

8ನೇ ತರಗತಿ

ಮಾರ್ಚ್ 25- ತೃತೀಯ ಭಾಷೆ

ಮಾರ್ಚ್ 26- ಗಣಿತ

ಮಾರ್ಚ್ 27- ವಿಜ್ಞಾನ

ಮಾರ್ಚ್ 28- ಸಮಾಜ ವಿಜ್ಞಾನ

9ನೇ ತರಗತಿ

ಮಾರ್ಚ್ 25- ತೃತೀಯ ಭಾಷೆ

ಮಾರ್ಚ್ 26- ಗಣಿತ

ಮಾರ್ಚ್ 27- ವಿಜ್ಞಾನ

ಮಾರ್ಚ್ 28- ಸಮಾಜ ವಿಜ್ಞಾನ

ಹಿಂದಿನ ಲೇಖನವರದಕ್ಷಿಣೆ ಕಿರುಕುಳ: ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣಾದ ಗೃಹಿಣಿ
ಮುಂದಿನ ಲೇಖನಪೂರ್ವ ಭಾದ್ರಪದ:  ಪ್ರಥಮ ದ್ವಿತೀಯ ತೃತೀಯ ಪಾದ