ಅಫ್ಘಾನಿಸ್ತಾನ: ಅಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಇಂದು ಬೆಳಗಿನ ಜಾವ 6.3 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಪ್ರಾಣಹಾನಿ ಬಗ್ಗೆ ಮಾಹಿತಿ ಇನ್ನೂ ಲಭ್ಯವಾಗಿಲ್ಲ.
ಭೂಕಂಪವು ಹೆರಾತ್ ಪ್ರಾಂತ್ಯದ ರಾಜಧಾನಿಯಿಂದ ಸುಮಾರು 28 ಕಿಲೋಮೀಟರ್ ದೂರದಲ್ಲಿ ಸಂಭವಿಸಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ತಿಳಿಸಿದೆ.
ಇನ್ನು ಘಟನೆಯಲ್ಲಿ 465 ಮನೆಗಳು ನಾಶವಾಗಿದ್ದು 135ಕ್ಕೂ ಹೆಚ್ಚು ಮನೆಗಳು ಹಾನಿಗೊಳಗಾಗಿವೆ. ನಗರದಲ್ಲಿ ದೂರವಾಣಿ ಸಂಪರ್ಕವೂ ಕಡಿತಗೊಂಡಿದ್ದರಿಂದ ರಕ್ಷಣಾ ಕಾರ್ಯಚರಣೆಯಲ್ಲಿ ತೊಂದರೆಯುಂಟಾಗಿದೆ. 2022ರ ಜೂನ್ ನಲ್ಲಿ ಪೂರ್ವ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭೂಕಂಪದಲ್ಲಿ 1,000 ಜನ ಸಾವನ್ನಪ್ಪಿದ್ದರು.