ಮನೆ ಅಪರಾಧ ಕಾನ್ಪುರದಲ್ಲಿ ಸರಣಿ ರಸ್ತೆ ಅಪಘಾತ; 6 ಮಂದಿ ಸಾವು

ಕಾನ್ಪುರದಲ್ಲಿ ಸರಣಿ ರಸ್ತೆ ಅಪಘಾತ; 6 ಮಂದಿ ಸಾವು

0

ಕಾನ್ಪುರ:  ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಭಾನುವಾರ ರಾತ್ರಿ ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯಲ್ಲಿ ನಡೆದಿದೆ.

ಕಾನ್ಪುರ ನಗರದ ಬಾಬುಪುರ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ತತ್ಮಿಲ್ ಕ್ರಾಸ್‌ರೋಡ್‌ನಲ್ಲಿ ವೇಗವಾಗಿ ಬಂದ ಎಲೆಕ್ಟ್ರಿಕ್  ಬಸ್ ಪಾದಚಾರಿಗಳಿಗೆ ಗುದ್ದಿದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದು, 9 ಮಂದಿ ಗಾಯಗೊಂಡಿದ್ದಾರೆ.

ರಾತ್ರಿ 11.30ರ ಸುಮಾರಿಗೆ ಈ ಘಟನೆ ನಡೆದಿದ್ದು, ನಿಯಂತ್ರಣ ತಪ್ಪಿದ ಎಲೆಕ್ಟ್ರಿಕ್ ಬಸ್ ಟ್ರಾಫಿಕ್ ಬೂತ್ ಮುರಿದು ಟ್ರಕ್ ಗೆ ಡಿಕ್ಕಿ ಹೊಡೆದಿದೆ. ಅಲ್ಲದೆ ಸ್ವಿಫ್ಟ್ ಕಾರು, ಎರಡು ಬೈಕ್, ಎರಡು ಸ್ಕೂಟಿ, ಒಂದು ಟೆಂಪೋ, ಒಂದು ಝೆನ್ ಕಾರಿಗೆ ಡಿಕ್ಕಿ ಹೊಡೆದಿದ್ದು, ವಾಹನಗಳು ಜಖಂಗೊಂಡಿವೆ. ಈ ಸರಣಿ ಅಪಘಾತದಲ್ಲಿ ಸಾವಿಗೀಡಾದ 6 ಮಂದಿ ಪೈಕಿ ನಾಲ್ವರನ್ನು ಗುರುತಿಸಲಾಗಿದ್ದು, ಇನ್ನುಳಿದವರ ಗುರುತು ಪತ್ತೆಗೆ ಪೊಲೀಸರು ಯತ್ನಿಸುತ್ತಿದ್ದಾರೆ.

ಅಪಘಾತ ನಡೆದ ಸ್ಥಳದಲ್ಲಿ ಬಸ್ ಚಾಲಕ ಪತ್ತೆಯಾಗಿಲ್ಲ. ಬಸ್ ಚಾಲಕನ ಬಗ್ಗೆ ತಿಳಿದುಕೊಳ್ಳಲು ಪೊಲೀಸರು ಈಗ ಸಂಬಂಧಪಟ್ಟ ಇಲಾಖೆಯನ್ನು ಸಂಪರ್ಕಿಸುತ್ತಿದ್ದಾರೆ. ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಹಿಂದಿನ ಲೇಖನರಾಷ್ಟ್ರಪಿತ ಗಾಂಧಿ ಹಾಗೂ ನೆಹರು ಮೊದಲ ಪ್ರಧಾನಿ ಎಂದು ಒಪ್ಪಲು ಧರ್ಮ ಸಂಸತ್ ನಿರಾಕರಣೆ
ಮುಂದಿನ ಲೇಖನಇಂದಿನಿಂದ ಸಂಸತ್ ಬಜೆಟ್ ಅಧಿವೇಶನ: ಸುಗಮ ಕಲಾಪಕ್ಕೆ ವಿಪಕ್ಷಗಳಿಗೆ ಪ್ರಧಾನಿ ಮೋದಿ ಮನವಿ