ಮನೆ ರಾಜ್ಯ ಕಾವೇರಿ ನದಿಯಲ್ಲಿ 6 ಜನ‌ ಜಲಸಮಾಧಿ – ದರ್ಗಾಕ್ಕೆ ಬಂದವರು ದುರಂತ ಅಂತ್ಯ

ಕಾವೇರಿ ನದಿಯಲ್ಲಿ 6 ಜನ‌ ಜಲಸಮಾಧಿ – ದರ್ಗಾಕ್ಕೆ ಬಂದವರು ದುರಂತ ಅಂತ್ಯ

0

ಮೈಸೂರು : ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆ ಕೆ.ಆರ್‌.ನಗರದ ಅರ್ಕೇಶ್ವರ ದೇಗುಲದ ಬಳಿ ನಡೆದಿದೆ. ಉರೂಸ್​ ಹಿನ್ನೆಲೆ 8 ಜನರ ತಂಡ ದರ್ಗಾಕ್ಕೆ ಬಂದಿದ್ದು, ಈ ವೇಳೆ ನದಿಗೆ ಈಜಲು ತೆರಳಿದ್ದಾಗ ದುರ್ಘಟನೆ ಸಂಭವಿಸಿದೆ. ಈ ಸ್ಥಳೀಯರು ಇಬ್ಬರನ್ನು ರಕ್ಷಿಸಿದ್ದು, ಉಳಿದ 6 ಜನ ನೀರುಪಾಲಾಗಿದ್ದಾರೆ. ಸ್ಥಳಕ್ಕೆ ಕೆ.ಆರ್.ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೈಸೂರು ಜಿಲ್ಲೆಯ ಕೆ.ಆರ್.ನಗರದಲ್ಲಿ ಇಂದು ಉರೂಸ್ ಹಿನ್ನೆಲೆ ದರ್ಗಾಕ್ಕೆ ಬೆಂಗಳೂರು ಮತ್ತು ಊಟಿಯಿಂದ ಸಾಕಷ್ಟು ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು. ಈ ಸಂದರ್ಭದಲ್ಲಿ ಎಂಟು ಜನರ ತಂಡವೊಂದು ಅರ್ಕೇಶ್ವರ ದೇವಸ್ಥಾನದ ಸಮೀಪವಿರುವ ಕಾವೇರಿ ನದಿಗೆ ಈಜಲು ತೆರಳಿದ್ದಾರೆ. ಈ ವೇಳೆ ನದಿಯಲ್ಲಿ ಮುಳುಗಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಸ್ಥಳೀಯರು ಇಬ್ಬರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ದುರದೃಷ್ಟವಶಾತ್ ಉಳಿದ ಆರು ಮಂದಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಮೈಸೂರಿನ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ 6 ಮಂದಿ ನೀರುಪಾಲಾದ ವಿಚಾರ ತಿಳಿದು ದುಃಖವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬ ಸದಸ್ಯರಿಗೆ ಅಗಲಿಕೆಯ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.

ಬೆಂಗಳೂರಿನ ಯಾಸಿನ್​(23) ಹಾಗೂ ಹೈಮಾ(13), ಊಟಿ ಮೂಲದ 38 ವರ್ಷದ ಸೈದ್ ಫಾತಿಮಾ, ಮೈಸೂರು ಜಿಲ್ಲೆಯ ನೇಹಾ(20), ಉಮೇರ್(7) ಮತ್ತು ಅಫಿಯಾ(20) ಮೃತರು. ಸದ್ಯ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮೃತದೇಹಗಳನ್ನು ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ ಪರಿಹಾರ ಘೋಷಣೆ – ಇನ್ನು ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಮೈಸೂರಿನ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ 6 ಮಂದಿ ನೀರುಪಾಲಾದ ವಿಚಾರ ತಿಳಿದು ದುಃಖವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬ ಸದಸ್ಯರಿಗೆ ಅಗಲಿಕೆಯ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದರು.

ಕುಟುಂಬ ಸದಸ್ಯರನ್ನು ಕಳೆದುಕೊಂಡು ನೊಂದಿರುವ ಜೀವಗಳಿಗೆ ಆರ್ಥಿಕ ಸವಾಲುಗಳು ಮತ್ತಷ್ಟು ಬಾಧಿಸದಿರಲಿ ಎಂಬ ಮಾನವೀಯ ಕಾಳಜಿಯೊಂದಿಗೆ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ದುರ್ಘಟನೆಯಲ್ಲಿ ರಕ್ಷಿಸಲ್ಪಟ್ಟು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಹೇಳಿದ್ದಾರೆ.