ಮನೆ ರಾಜ್ಯ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಬರ ಪಟ್ಟಿಗೆ ರಾಜ್ಯದ 62 ತಾಲೂಕು ಸೇರ್ಪಡೆ: ಕೃಷ್ಣಭೈರೇಗೌಡ

ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಬರ ಪಟ್ಟಿಗೆ ರಾಜ್ಯದ 62 ತಾಲೂಕು ಸೇರ್ಪಡೆ: ಕೃಷ್ಣಭೈರೇಗೌಡ

0

ಚಿತ್ರದುರ್ಗ: ಆಗಸ್ಟ್ 18ಕ್ಕೆ ಮಳೆ ಕೊರೆತೆ ಇರುವ ತಾಲೂಕುಗಳಲ್ಲಿ ಬೆಳೆ ಸಮೀಕ್ಷೆ ನಡೆಸಿದ್ದೇವೆ. ಒಂದು ಸುತ್ತಿನ ಬೆಳೆ ಸಮೀಕ್ಷೆ ಪ್ರಕಾರ ಕೇಂದ್ರ ಸರ್ಕಾರದ ಮಾರ್ಗ ಸೂಚಿಯಂತೆ 62 ತಾಲೂಕು ಬರ ಪಟ್ಟಿಗೆ ಸೇರಿಸಲಾಗಿದೆ  ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.

ಇಂದು ಚಿತ್ರದುರ್ಗದಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಅವರು, ಇನ್ನೊಂದು ಸುತ್ತು ಬೆಳೆ ಸಮೀಕ್ಷೆ ಮಾಡಬೇಕು ಎಂದಾಗ ಉಳಿದ 51 ತಾಲೂಕು ಬೆಳೆ ಸಮೀಕ್ಷೆ ನಡೆಸಲಾಗುತ್ತಿದೆ. ಸೆಪ್ಟೆಂಬರ್ 2ಕ್ಕೆ 83 ತಾಲ್ಲೂಕು ಬರ ಪಟ್ಟಿಗೆ ಸೇರಿಸಲು ಸೂಚನೆ ನೀಡಿದ್ದೇವೆ. ಇನ್ನು ಮೂರ್ನಾಲ್ಕು ದಿನಗಳಲ್ಲಿ ಸಮೀಕ್ಷೆ ವರದಿ ಬರುತ್ತದೆ. ಕೇಂದ್ರದ ಮಾರ್ಗಸೂಚಿ ಪ್ರಕಾರ ಬರ ಘೋಷಣೆ ಮಾಡುತ್ತೇವೆ. ಕೇಂದ್ರ ಸರ್ಕಾರಕ್ಕೆ ಮನವಿಯನ್ನೂ ನಾವು ನೀಡುತ್ತೇವೆ ಎಂದು ಹೇಳಿದರು.

ಟಾಸ್ಕ್ ಪೋರ್ಸ್ ರಚನೆ

ಎಲ್ಲಿ ಬರ ಇದೆ ಅಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ ಪೋರ್ಸ್ ರಚನೆ ಮಾಡುತ್ತೇವೆ. ಮೇವಿನ ಕೊರತೆ ಆಗಬಾರದು ಎಂದು ರೈತರಿಗೆ 20 ಕೋಟಿ ರೂ. ವೆಚ್ಚದಲ್ಲಿ ಉಚಿತ ಮೇವಿನ ಬೀಜ ನೀಡುತ್ತೇವೆ. ಬರ ಪ್ರದೇಶದಲ್ಲಿ ನರೇಗಾದಲ್ಲಿ 150 ಉದ್ಯೋಗ ಖಾತ್ರಿ ಕೆಲಸ ನೀಡಲು ಚಿಂತನೆ ಮಾಡಿದ್ದೇವೆ. ಜಿಲ್ಲಾಧಿಕಾರಿ ಖಾತೆಯಲ್ಲಿ 529 ಕೋಟಿ ಹಣ ಬಿಡುಗಡೆ ಮಾಡಿದ್ದೇವೆ ಎಂದರು.

ಮಾನದಂಡ ಬದಲಾವಣೆಗೆ ಮನವಿ

ಕೇಂದ್ರ ಸರ್ಕಾರದ ಮಾರ್ಗಸೂಚಿ ಬದಲಾವಣೆಗೆ ಮನವಿ ಮಾಡುತ್ತೇವೆ. ಜನರ ನಿರೀಕ್ಷೆಯಂತೆ ಬರ ಘೋಷಣೆ ಮಾಡಲು ಆಗಲ್ಲ. ನಮ್ಮ ಸರ್ಕಾರ ಬಂದ ಬಳಿಕ ಪತ್ರ ಬರೆದಿದ್ದೇವೆ. ಇನ್ನೊಂದು ಬಾರಿ ಮಾನದಂಡ ಬದಲಾವಣೆ ಮಾಡಿ ಎಂದು ಮನವಿ ಮಾಡುತ್ತೇವೆ. ಜನರಿಗೆ ನ್ಯಾಯ ಕೊಡಲು ಕೇಂದ್ರ ಸರ್ಕಾರದ ಮಾನದಂಡ ಕೈ ಕಟ್ಟಿ ಹಾಕಿದಂತಾಗಿದೆ ಎಂದು ಕೇಂದ್ರ ಸರ್ಕಾರ ವಿರುದ್ಧ ಅಸಮಾಧಾನ ಹೊರಹಾಕಿದರು.

ಹಿಂದಿನ ಲೇಖನಪಕ್ಷದ ಮುಖಂಡರ ಜತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಹತ್ವದ ಸಮಾಲೋಚನೆ
ಮುಂದಿನ ಲೇಖನಕ್ಷೀರ ಭಾಗ್ಯ ಯೋಜನೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಪಾರ ಮೆಚ್ಚುಗೆ ಇದೆ: ಸಿಎಂ ಸಿದ್ದರಾಮಯ್ಯ