ಮನೆ ರಾಜ್ಯ ರಾಜ್ಯದಲ್ಲಿ 648 ಮಂದಿಗೆ ಕೋವಿಡ್ ಪಾಸಿಟಿವ್

ರಾಜ್ಯದಲ್ಲಿ 648 ಮಂದಿಗೆ ಕೋವಿಡ್ ಪಾಸಿಟಿವ್

0

ಬೆಂಗಳೂರು (Bengaluru): ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಕಳೆದ 24 ಗಂಟೆಯಲ್ಲಿ 648 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,57,991ಕ್ಕೆ ಏರಿಕೆಯಾಗಿದೆ.

ಸೋಂಕಿನಿಂದ ಇಂದು ಒಬ್ಬರು ಸಾವನ್ನಪ್ಪಿದ್ದಾರೆ. ಹೀಗಾಗಿ ಸಾವಿನ ಸಂಖ್ಯೆ 40,067ಕ್ಕೆ ತಲುಪಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

532 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,13,885ಕ್ಕೆ ಏರಿಕೆಯಾಗಿದೆ. ಇನ್ನು ಸಕ್ರಿಯ ಪ್ರಕರಣಗಳ ಸಂಖ್ಯೆ 3,997 ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ 615 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,93,337ಕ್ಕೆ ಏರಿಕೆಯಾಗಿದೆ.

ಹಿಂದಿನ ಲೇಖನಪಿಎಸ್ಐ ನೇಮಕಾತಿ ಪ್ರಕರಣ: ಬ್ಯಾಡರಹಳ್ಳಿ ಪಿಎಸ್ಐ ಬಂಧನ
ಮುಂದಿನ ಲೇಖನಜೂ.19 ರಂದು ಬೆಂಗಳೂರಿನಲ್ಲಿ ಟಿ20 ಪಂದ್ಯ: ಗೃಹ ಸಚಿವ ಅರಗ ಜ್ಞಾನೇಂದ್ರರಿಂದ ಭದ್ರತೆ ಪರಿಶೀಲನೆ