ಮನೆ ಆರೋಗ್ಯ ಕೊರೋನಾ: ದೇಶದಲ್ಲಿಂದು 67 ಸಾವಿರ ಹೊಸ ಕೇಸ್ ಪತ್ತೆ

ಕೊರೋನಾ: ದೇಶದಲ್ಲಿಂದು 67 ಸಾವಿರ ಹೊಸ ಕೇಸ್ ಪತ್ತೆ

0

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 67,597 ಪತ್ತೆಯಾಗಿದ್ದು, 1,188 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ. 

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,23,39,611ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,04,062ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 9,94,891ಕ್ಕೆ ತಲುಪಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 1,80,456 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,08,40,658ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ 13,46,534ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 74,29,08,121 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,70,21,72,615 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ಹಿಂದಿನ ಲೇಖನರಾತ್ರೋರಾತ್ರಿ ಎನ್ ಟಿಎಂ ಶಾಲೆ ಹಳೆಯ ಕಟ್ಟಡ ನೆಲಸಮ
ಮುಂದಿನ ಲೇಖನಮರಕ್ಕೆ ಕಾರು ಡಿಕ್ಕಿ: ಮೂವರು ಸಾವು