ಮನೆ ರಾಜ್ಯ ರಾಜ್ಯದಲ್ಲಿ 676 ಮಂದಿಗೆ ಕೋವಿಡ್ ಪಾಸಿಟಿವ್

ರಾಜ್ಯದಲ್ಲಿ 676 ಮಂದಿಗೆ ಕೋವಿಡ್ ಪಾಸಿಟಿವ್

0

ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 676 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,62,775ಕ್ಕೆ ಏರಿಕೆಯಾಗಿದೆ.

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇದರಿಂದ ಸಾವಿನ ಸಂಖ್ಯೆ 40,071 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

804 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,17,770ಕ್ಕೆ ಏರಿಕೆಯಾಗಿದೆ. ಇನ್ನು 4,892 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ 626 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,97,860ಕ್ಕೆ ಏರಿಕೆಯಾಗಿದೆ.