ಮನೆ ರಾಷ್ಟ್ರೀಯ ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌  ಬೆಲೆ  69.50 ಕಡಿತ

ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌  ಬೆಲೆ  69.50 ಕಡಿತ

0

ನವದೆಹಲಿ: ತೈಲ ಕಂಪನಿಗಳು ಜೂನ್ 1 ರಿಂದ ತಕ್ಷಣದಿಂದ ಜಾರಿಗೆ ಬರುವಂತೆ ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌  ಬೆಲೆಯನ್ನು ₹ 69.50 ಹಾಗೂ ಜೆಟ್ ಇಂಧನ(ಎಟಿಎಫ್) ದರವನ್ನು ಶೇ 6.5ರಷ್ಟು ಕಡಿತಗೊಳಿಸಿವೆ.

Join Our Whatsapp Group

ಇದರೊಂದಿಗೆ ದೆಹಲಿಯಲ್ಲಿ 19 ಕೆ.ಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ₹1,676 ಇದೆ.  ಸ್ಥಳೀಯ ತೆರಿಗೆಗಳ ಆಧಾರದ ಮೇಲೆ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಭಿನ್ನವಾಗಿರುತ್ತವೆ.

ಸರ್ಕಾರಿ ಸ್ವಾಮ್ಯದ ಇಂಧನ ಚಿಲ್ಲರೆ ವ್ಯಾಪಾರಿಗಳ ಬೆಲೆ ಅಧಿಸೂಚನೆಯ ಪ್ರಕಾರ, ಏವಿಯೇಷನ್ ​​ಟರ್ಬೈನ್ ಇಂಧನ (ಎಟಿಎಫ್) ಬೆಲೆಯನ್ನು ರಾಷ್ಟ್ರ ರಾಜಧಾನಿಯಲ್ಲಿ ಪ್ರತಿ ಲೀಟರ್‌ಗೆ ಶೇ 6.5 ರಷ್ಟು ಕಡಿತಗೊಳಿಸಲಾಗಿದೆ. ಇದರೊಂದಿಗೆ ಮುಂಬೈನಲ್ಲಿ ಎಟಿಎಫ್ ದರ ‌ಪ್ರತಿ ಲೀಟರ್‌ಗೆ ₹95,173.70 ರಿಂದ ₹ 88,834.27ಕ್ಕೆ ಇಳಿಕೆಯಾಗಿದೆ.

ಈ ವರ್ಷದಲ್ಲಿ 3ನೇ ಬಾರಿಗೆ ಇಂಧನ ದರವನ್ನು ಕಡಿತಗೊಳಿಸಲಾಗಿದೆ. ಮಾರ್ಚ್ 1 ರಂದು 19 ಕೆ.ಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ದರವನ್ನು ₹19 ಮತ್ತು ಏಪ್ರಿಲ್‌ನಲ್ಲಿ  ₹30.50 ‌‌ರಷ್ಟು ಕಡಿತಗೊಳಿಸಲಾಗಿತ್ತು.

ಸರ್ಕಾರಿ ಸ್ವಾಮ್ಯದ ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOC), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL), ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಬೆಂಚ್‌ಮಾರ್ಕ್ ಅಂತರರಾಷ್ಟ್ರೀಯ ಇಂಧನ ಮತ್ತು ವಿದೇಶಿ ವಿನಿಮಯದ ಸರಾಸರಿ ಬೆಲೆಯನ್ನು ಆಧರಿಸಿ ಪ್ರತಿ ತಿಂಗಳ 1 ರಂದು ಎಟಿಎಫ್‌ ಮತ್ತು ಅಡುಗೆ ಅನಿಲದ ಬೆಲೆಗಳನ್ನು ಪರಿಷ್ಕರಿಸುತ್ತವೆ.