ಮನೆ ಸುದ್ದಿ ಜಾಲ ಅರುಣಾಚಲ ಪ್ರದೇಶದಲ್ಲಿ ಹಿಮಪಾತಕ್ಕೆ ಸಿಲುಕಿದ 7 ಸೈನಿಕರು, ತೀವ್ರಗೊಂಡ ಶೋಧ

ಅರುಣಾಚಲ ಪ್ರದೇಶದಲ್ಲಿ ಹಿಮಪಾತಕ್ಕೆ ಸಿಲುಕಿದ 7 ಸೈನಿಕರು, ತೀವ್ರಗೊಂಡ ಶೋಧ

0

ಇಟಾನಗರ: ಅರುಣಾಚಲ ಪ್ರದೇಶದಲ್ಲಿ ಸಂಭವಿಸಿದ ಭೀಕರ ಹಿಮಪಾತದಲ್ಲಿ 7 ಭಾರತೀಯ ಸೈನಿಕರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದ್ದು, ಶೋಧಕಾರ್ಯ ಮುಂದುವರೆದಿದೆ.

ಅರುಣಾಚಲ ಪ್ರದೇಶದ ಕಮೆಂಗ್ ಸೆಕ್ಟರ್‌ನ ಎತ್ತರದ ಪ್ರದೇಶದಲ್ಲಿ ಹಿಮಪಾತ ಸಂಭವಿಸಿದ್ದು, ಈ ವೇಳೆ ಏಳು ಭಾರತೀಯ ಸೇನೆಯ ಸಿಬ್ಬಂದಿಗಳು ಸಿಲುಕಿ ಹಾಕಿಕೊಂಡಿದ್ದಾರೆ ಎಂದು ವರದಿಯಾಗಿದೆ ಮತ್ತು ಅವರನ್ನು ಪತ್ತೆಹಚ್ಚಲು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕೃತ ಮೂಲಗಳು ಸೋಮವಾರ ತಿಳಿಸಿವೆ.  
ನಾಪತ್ತೆಯಾದ ಸೇನಾ ಸಿಬ್ಬಂದಿಗಳು ಗಸ್ತು ತಿರುಗುವ ತಂಡದ ಭಾಗವಾಗಿದ್ದರು ಮತ್ತು ಭಾನುವಾರ ತಡರಾತ್ರಿ ಸಂಭವಿಸಿದ ಹಿಮಕುಸಿತದಲ್ಲಿ ಅವರು ಸಿಲುಕಿದ್ದಾರೆ ಎಂದು ಶಂಕಿಸಲಾಗಿದೆ. 

“ಪ್ರಸ್ತುತ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಾಯ ಮಾಡಲು ವಿಶೇಷ ತಂಡಗಳನ್ನು ಏರ್ ಲಿಫ್ಟ್ ಮಾಡಲಾಗಿದೆ. ಕಳೆದ ಕೆಲವು ದಿನಗಳಿಂದ ಭಾರೀ ಹಿಮಪಾತದೊಂದಿಗೆ ಈ ಪ್ರದೇಶವು ಪ್ರತಿಕೂಲ ಹವಾಮಾನಕ್ಕೆ ಸಾಕ್ಷಿಯಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

ಹಿಂದಿನ ಲೇಖನತಪ್ಪಿತಸ್ಥರ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಸಕ್ಷಮ ಪ್ರಾಧಿಕಾರ ವಿಫಲ: ಕರ್ನಾಟಕ ಲೋಕಾಯುಕ್ತ ವೆಬ್ ಸೈಟ್ ನಲ್ಲಿ ಕೇಸ್ ಗಳ ವಿವರ ಬಹಿರಂಗ
ಮುಂದಿನ ಲೇಖನನನ್ನ ಮಗುವಿಗೆ ಶಾಸಕ ಬಸವರಾಜ ತೇಲ್ಕೂರ್ ಅವರೇ ತಂದೆ: ಮಹಿಳೆ ಆರೋಪ