ಮನೆ ಅಪರಾಧ 7 ಭ್ರೂಣಗಳ ಪತ್ತೆ ಪ್ರಕರಣ: ಭ್ರೂಣ ಎಸೆದಿದ್ದ ಆಸ್ಪತ್ರೆ ಸೀಜ್ ಮಾಡಿದ ಡಿಎಚ್‌ಒ

7 ಭ್ರೂಣಗಳ ಪತ್ತೆ ಪ್ರಕರಣ: ಭ್ರೂಣ ಎಸೆದಿದ್ದ ಆಸ್ಪತ್ರೆ ಸೀಜ್ ಮಾಡಿದ ಡಿಎಚ್‌ಒ

0

ಬೆಳಗಾವಿ(Belagavi) : ಬೆಳಗಾವಿ ನಗರವನ್ನು ಹೌಹಾರುವಂತೆ ಮಾಡಿದ್ದ ಮೂಡಲಗಿ ಪಟ್ಟಣದ ಹಳ್ಳದಲ್ಲಿ 7 ಭ್ರೂಣಗಳ ಪತ್ತೆ ಪ್ರಕರಣವನ್ನು ಗಂಭೀವಾಗಿ ತೆಗೆದುಕೊಂಡಿರುವ ಬೆಳಗಾವಿ ಜಿಲ್ಲಾಡಳಿತ ಇಂದು ಡಿಹೆಚ್ ಓ ಹಾಗೂ ಪೊಲೀಸರ ನೇತೃತ್ವದಲ್ಲಿ ನಗರದ ಮೆಟರ್ನಿಟಿ ಆಸ್ಪತ್ರೆಗಳ ಮೇಲೆ ದಾಳಿ ನಡೆಸಿ, ವೆಂಕಟೇಶ ಮೆಟರ್ನಿಟಿ ಆಸ್ಪತ್ರೆಯನ್ನು  ಸೀಜ್ ಮಾಡಿದ್ದಾರೆ.

ಬೆಳಗಾವಿ ಜಿಲ್ಲೆಯ ಗೋಕಾಕ್​ ಮತ್ತು ಮೂಡಲಗಿ ತಾಲೂಕಿನಲ್ಲಿ ಬೆಳಗಾವಿ ಜಿಲ್ಲಾ ಆರೋಗ್ಯಾಧಿಕಾರಿ ಮಹೇಶ ಕೋಣಿ, ಮೂಡಲಗಿ ಪೋಲಿಸರ ನೇತೃತ್ವದಲ್ಲಿ ನವಜೀವನ ಆಸ್ಪತ್ರೆ ಹಾಗೂ ವೆಂಕಟೇಶ ಮೆಟರ್ನಿಟಿ ಆಸ್ಪತ್ರೆ ಸೇರಿದಂತೆ ಒಟ್ಟು ಆರು ಆಸ್ಪತ್ರೆಗಳ ಮೇಲೆ ದಾಳಿ ನಡೆಸಲಾಗಿದ್ದು, ದಾಳಿ ವೇಳೆ ವೆಂಕಟೇಶ ಮೆಟರ್ನಿಟಿ ಆಸ್ಪತ್ರೆ ಹಾಗೂ ನವಜೀವನ ಆಸ್ಪತ್ರೆಗಳ ಕೈವಾಡ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಎರಡು ಆಸ್ಪತ್ರೆಗಳನ್ನು ಡಿಎಚ್​ಒ ಮಹೇಶ ಕೋಣಿ ಸೀಜ್ ಮಾಡಿದ್ದಾರೆ.

ತಪ್ಪೊಪ್ಪಿಕೊಂಡ ವೈದ್ಯೆ

ದಾಳಿಯ ಸಂದರ್ಭದಲ್ಲಿ ವೆಂಕಟೇಶ ಮೆಟರ್ನಿಟಿ ಆಸ್ಪತ್ರೆ ವೈದ್ಯೆ ಡಾ.ವೀಣಾ ಕಣಕರೆಡ್ಡಿ, ಏಳು ಭ್ರೂಣಗಳನ್ನು ನಾವೇ ಎಸೆದಿರುವುದಾಗಿ ತಪ್ಪು ಒಪ್ಪಿಕೊಂಡಿದ್ದಾರೆ. ಆಸ್ಪತ್ರೆಯ ಪಾಮೋಲಿನನಲ್ಲಿ ಭ್ರೂಣಗಳನ್ನು ಪ್ರಿಸರ್ವ್ ಮಾಡಿ ಬಾಟಲ್​ನಲ್ಲಿ ಇಡಲಾಗಿತ್ತು. ಅಧಿಕಾರಿಗಳ ದಾಳಿಗೆ ಹೆದರಿ ಹಳೆಯ ಆಸ್ಪತ್ರೆಯಿಂದ ಹೊಸ ಆಸ್ಪತ್ರೆಗೆ ಶಿಫ್ಟ್ ಆಗುವಾಗ ಕಳೆದ ನಾಲ್ಕು ದಿನಗಳ ಹಿಂದಷ್ಟೇ ಆಸ್ಪತ್ರೆಯ ಆಯಾ(ಸಿಬ್ಬಂದಿ) ಬಳಿ ಭ್ರೂಣಗಳನ್ನು ಎಸೆಯಲು ಕೊಟ್ಟಿದ್ದಾರೆ. ವೆಂಕಟೇಶ ಆಸ್ಪತ್ರೆ ಸಿಬ್ಬಂದಿ ಅವುಗಳನ್ನು ತೆಗೆದುಕೊಂಡು ಹೋಗಿ ಜೂ.23ರಂದು ಹಳ್ಳದಲ್ಲಿ ತಪ್ಪು ಒಪ್ಪಿಕೊಂಡಿದ್ದಾರೆ.

ಅಬಾರ್ಷನ್ ಮಾಡಿಸಿದ್ದ ಏಳು ಭ್ರೂಣಗಳು : ದೊರೆತಿರುವ ಏಳು ಭ್ರೂಣಗಳು ಮೂರು ವರ್ಷಗಳ ಹಿಂದೆ ಅಬಾರ್ಷನ್ ಮಾಡಿದ್ದವುಗಳು ಎಂಬ ವಿಚಾರ ಪ್ರಾಥಮಿಕ ತನಿಖೆ ವೇಳೆ ಬಯಲಾಗಿದೆ. ಪೊಲೀಸರ ದಾಳಿ ಭೀತಿಯಿಂದ ಕಳೆದ ಜೂನ್.23ರಂದು ರಾತ್ರೋರಾತ್ರಿ ಏಳು ಭ್ರೂಣಗಳನ್ನು ಐದು ಬಾಟಲಿಗಳಲ್ಲಿ ಆಸ್ಪತ್ರೆ ಸಿಬ್ಬಂದಿ ಹಳ್ಳಕ್ಕೆ ಎಸೆದಿದ್ದರು.

ಸದ್ಯ ಏಳು ಭ್ರೂಣ ಮೃತದೇಹಗಳು ಬೆಳಗಾವಿಯ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ಇರಿಸಲಾಗಿದೆ. ವರದಿ ಬಂದ ಮೇಲೆ ಮತ್ತಷ್ಟು ಆಸ್ಪತ್ರೆಗಳ ಮೇಲೆ ಡಿಎಚ್ಓ ಅವರು ದಾಳಿ ನಡೆಸುವ ಸಾಧ್ಯತೆ ಇದೆ.

ಇದನ್ನೂ ಓದಿ. . . ಹಳ್ಳದಲ್ಲಿ ತೇಲಿಬಂದ  7 ಭ್ರೂಣಗಳು