ಮನೆ ಅಪರಾಧ ಭೀಕರ ಅಪಘಾತ: ಏಳು ಜನ ಸ್ಥಳದಲ್ಲೇ ಸಾವು

ಭೀಕರ ಅಪಘಾತ: ಏಳು ಜನ ಸ್ಥಳದಲ್ಲೇ ಸಾವು

0

ಮಥುರಾ(Mathura)(ಉತ್ತರ ಪ್ರದೇಶ): ಜಿಲ್ಲೆಯ ನೌಜಿಲ್ ಪೊಲೀಸ್ ಠಾಣಾ ವ್ಯಾಪ್ತಿಯ ಯಮುನಾ ಎಕ್ಸ್‌ಪ್ರೆಸ್‌ವೇ 68 ರಲ್ಲಿ ಶನಿವಾರ ನಸುಕಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸುದ್ದಿ ತಿಳಿದಾಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಮಥುರಾ ಜಿಲ್ಲಾಸ್ಪತ್ರೆಗೆ ರವಾನಿಸಿದರು. ಕಾರು ದೆಹಲಿಯಿಂದ ಆಗ್ರಾಕ್ಕೆ ಹೋಗುತ್ತಿದ್ದ  ವೇಳೆ ಅಪರಿಚಿತ ವಾಹನವೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು, ಮೂವರು ಪುರುಷರು ಹಾಗೂ ಮಗುವೊಂದು ಸೇರಿ ಎಲ್ಲರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರ ಗುರುತನ್ನು ಪತ್ತೆಹಚ್ಚಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

ಹಿಂದಿನ ಲೇಖನಹೈಕಮಾಂಡ್ ನಿರ್ಧಾರಕ್ಕೆ ಬದ್ದ: ಬಿಎಸ್ ವೈ
ಮುಂದಿನ ಲೇಖನಮೂವರು ಐಎಎಸ್​ ಅಧಿಕಾರಿಗಳಿಗೆ ಜೈಲು ಶಿಕ್ಷೆ ವಿಧಿಸಿದ ಆಂದ್ರ ಪ್ರದೇಶ ಹೈಕೋರ್ಟ್​