ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿದ ಭೂಕಂಪದ ನಂತರ ಅವಶೇಷಗಳ ಕೆಳಗೆ ಸಿಲುಕಿರುವ 7 ವರ್ಷದ ಬಾಲಕಿ ತನ್ನ ಪುಟ್ಟ ತಮ್ಮನ ತಲೆಯನ್ನು ರಕ್ಷಿಸಿದ್ದಾಳೆ.
ಈ ಸಂಬಂಧದ ಫೋಟೋ ನೆಟ್ಟಿಗರ ಮನಸ್ಸನ್ನು ಕರಗಿಸಿದೆ. ಟ್ವಿಟರ್ ನಲ್ಲಿ ಫೋಟೋವನ್ನು ಹಂಚಿಕೊಂಡಿರುವ ವಿಶ್ವಸಂಸ್ಥೆ ಪ್ರತಿನಿಧಿ ಮೊಹಮದ್ ಸಫಾ, ಇಬ್ಬರು 17 ಗಂಟೆಗಳ ಕಾಲ ಅವಶೇಷಗಳಡಿಯಲ್ಲಿದ್ದು, ಸುರಕ್ಷಿತವಾಗಿ ಹೊರಬಂದಿದ್ದಾರೆ ಎಂದು ತಿಳಿಸಿದ್ದಾರೆ.
ಸಂಕಟದ ಪರಿಸ್ಥಿತಿಯಲ್ಲೂ ಆಕೆಗಿರುವ ತಮ್ಮನ ಬಗೆಗಿನ ಕಾಳಜಿಗಾಗಿ ಆ ಬಾಲಕಿಯನ್ನು ಅನೇಕರು ಹೊಗಳಿದ್ದಾರೆ.
ಮಂಗಳವಾರದಂದು ಸುಮಾರು 5,103 ಜನರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದ್ದು, ಟರ್ಕಿ ಮತ್ತು ಸಿರಿಯಾದಲ್ಲಿ ವಿನಾಶವನ್ನು ಉಂಟುಮಾಡಿದ 7.8 ಭೂಕಂಪದಲ್ಲಿ ಸಾವಿರಾರು ಜನರು ಗಾಯಗೊಂಡಿದ್ದಾರೆ.
ಟರ್ಕಿಯ ದಕ್ಷಿಣ ಪ್ರದೇಶಗಳಲ್ಲಿ ಸೋಮವಾರ 7,6 ಮತ್ತು 6.0 ತೀವ್ರತೆಯ ಎರಡು ಭೂಕಂಪಗಳು ಸಂಭವಿಸಿದವು. ನಂತರ ನಿನ್ನೆ (ಮಂಗಳವಾರ) 5.6 ತೀವ್ರತೆಗೂ ಹೆಚ್ಚಿನ ಭೂಕಂಪ ಆಗಿದೆ. ಪರಿಹಾರ ಸಾಮಾಗ್ರಿಗಳು ಮತ್ತು ರಕ್ಷಣಾ ತಂಡಗಳನ್ನು ಕಳುಹಿಸಲು ದೇಶಗಳು ಸ್ಪರ್ಧಿಸುತ್ತಿರುವಾಗ , ಟರ್ಕಿಯಲ್ಲಿ ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಲಾಗಿದೆ.