ಆಫ್ರಿಕಾ: ಪಶ್ಚಿಮ ಆಫ್ರಿಕಾದ ಮಾಲಿಯಲ್ಲಿ ಚಿನ್ನದ ಗಣಿ ಕುಸಿದು 70 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಈ ಅಪಘಾತದ ಬಗ್ಗೆ ತೀವ್ರ ವಿಷಾದ ವ್ಯಕ್ತಪಡಿಸಿದ ಮಾಲಿ ಸಚಿವಾಲಯವು ಸುರಕ್ಷತಾ ಮಾನದಂಡಗಳನ್ನು ಅನುಸರಿಸಲು ಕೇಳಿಕೊಂಡಿದೆ.
ಸುರಕ್ಷತಾ ಮಾನದಂಡಗಳನ್ನು ಅನುಸರಿಸದೆ ಗಣಿಗಾರರು ಗ್ಯಾಲರಿಯನ್ನು ಅಗೆದಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಸಚಿವಾಲಯ ವಕ್ತಾರ ಬೇ ಕೌಲಿಬಾಲಿ ಹೇಳಿದ್ದಾರೆ.
ಇದಕ್ಕೂ ಮೊದಲು ಸುರಕ್ಷತಾ ಮಾನದಂಡಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳಲು ಹಲವು ಬಾರಿ ಕಾರ್ಮಿಕರಿಗೆ ಸಲಹೆ ನೀಡಲಾಗಿತ್ತು ಎಂದು ಹೇಳಿದ್ದಾರೆ.
Saval TV on YouTube