ಕಾಗವಾಡ (ಬೆಳಗಾವಿ ಜಿಲ್ಲೆ): ದಾಖಲೆ ಇಲ್ಲದೇ ಸಾಗಿಸುತ್ತಿದ್ದ ₹ 70 ಲಕ್ಷ ನಗದನ್ನು ಕಾಗವಾಡ– ಮಿರಜ್ ರಸ್ತೆಯ ಚೆಕ್ ಪೋಸ್ಟ್ ನಲ್ಲಿ ಬುಧವಾರ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಮಹಾರಾಷ್ಟ್ರದ ಮಿರಜ್ ನಿಂದ ಕಾಗವಾಡ ತಾಲ್ಲೂಕಿನ ಉಗಾರ ಪಟ್ಟಣಕ್ಕೆ ಬರುತ್ತಿದ್ದ ಕಾರಿನಲ್ಲಿ ಈ ಹಣ ಸಿಕ್ಕಿದೆ. ಕಾರ್ ವಶಪಡಿಸಿಕೊಂಡ ಪೊಲೀಸರು ಚಾಲನಕನ್ನು ಬಂಧಿಸಿದ್ದಾರೆ.
ಆದರೆ, ಹಣ ಯಾರಿಗೆ ಸೇರಿದ್ದು ಎಂಬ ಮಾಹಿತಿ ನೀಡಿಲ್ಲ. ಕಾಗವಾಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇನ್ನೊಂದೆಡೆ ಹಾರೂಗೇರಿ ಚೆಕ್ ಪೋಸ್ಟ್ ನಲ್ಲಿ ಕೂಡ 2.30 ಲಕ್ಷ ಹಣವನ್ನು ವಶಕ್ಕೆ ಪಡೆಯಲಾಗಿದೆ.
ಯರಗಟ್ಟಿ ಗೋದಾಮಿನಲ್ಲಿ ಸಂಗ್ರಹಿಸಿ ಇಟ್ಟಿದ್ದ 3.5 ಲಕ್ಷ ಮೊತ್ತದ ಹೊಲಿಗೆ ಯಂತ್ರಗಳನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ.