ಮನೆ ಆರೋಗ್ಯ ದೇಶದಲ್ಲಿ ಲಕ್ಷಕ್ಕಿಂತ ಕಡಿಮೆ ಕೊರೊನಾ ಸೋಂಕಿತರ ಸಂಖ್ಯೆ

ದೇಶದಲ್ಲಿ ಲಕ್ಷಕ್ಕಿಂತ ಕಡಿಮೆ ಕೊರೊನಾ ಸೋಂಕಿತರ ಸಂಖ್ಯೆ

0

ನವದೆಹಲಿ: ಕೊರೊನಾ ಮಹಾಮಾರಿ ಕಳೆದ ಕೆಲವು ದಿನಗಳಿಂದ ತನ್ನ ಅಬ್ಬರ ಕಡಿಮೆ ಮಾಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 71,365 ಹೊಸ ಸೋಂಕಿತರು ಪತ್ತೆಯಾಗಿದ್ದರೆ.

1,217 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಸತತ ಮೂರನೇ ದಿನವೂ ದೇಶದಲ್ಲಿ ಹೊಸ ಸೋಂಕಿನ ಪ್ರಮಾಣ ಲಕ್ಷಕ್ಕಿಂತ ಕೆಳಗೇ ದಾಖಲಾದಂತೆ ಆಗಿದೆ.

ದೇಶದಲ್ಲಿಂದು 71,365 ಹೊಸ ಪ್ರಕರಣಗಳು ಪತ್ತೆಯಾಗುವುದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 4,24,10,976ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 5,05,279ಕ್ಕೆ ತಲುಪಿದೆ. 

ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 8,92,828ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ , 1,72,211 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,10,12,869ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 13,46,534ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 74,29,08,121 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಕೇಂದ್ರ ಸರ್ಕಾರದ ಮಾಹಿತಿ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,70,87,06,705 ಜನರಿಗೆ ಲಸಿಕೆಯನ್ನು ನೀಡಲಾಗಿದೆ.

ಹಿಂದಿನ ಲೇಖನಹಿಜಾಬ್, ಕೇಸರಿ ಶಾಲು ವಿವಾದ: ಎಲ್ಲರ ಚಿತ್ತ ಹೈಕೋರ್ಟ್ ತೀರ್ಪಿನತ್ತ
ಮುಂದಿನ ಲೇಖನಹಿಜಾಬ್ ಕಾರಣಕ್ಕೆ ಕಾಲೇಜು ಪ್ರವೇಶ ನಿರ್ಬಂಧಿಸುವುದು ಭಯಾನಕ: ಮಲಾಲ